ಹ್ಯಾಮರ್ ಥ್ರೋ- ರಾಜ್ಯಮಟ್ಟಕ್ಕೆ ಆಯ್ಕೆ.

ಹ್ಯಾಮರ್ ಥ್ರೋ- ರಾಜ್ಯಮಟ್ಟಕ್ಕೆ ಆಯ್ಕೆ.

ಹ್ಯಾಮರ್ ಥ್ರೋ- ರಾಜ್ಯಮಟ್ಟಕ್ಕೆ ಆಯ್ಕೆ.

ಕಲಬುರಗಿ: ನಗರದ ಹೈದ್ರಾಬಾದ್ ಕರ್ನಾಟಕ ಶಿಕ್ಚಣ ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯ ಕಲಬುರಗಿಯ

ಕುಮಾರಿ ಆಶಾ ಭುತಾಳಿ

ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನೀಯ ಈ ಸಾಧನಗೆ ಹೈ.ಕ.ಶಿ.ಸಂಸ್ಥೆಯ ಅಧ್ಯಕ್ಚರು ಹಾಗೂ ವಿಧಾನ ಪರಿಷತ್ ನ ಸದಸ್ಯರಾದ ಶಶೀಲ ಜಿ.ನಮೋಶಿ, ಉಪಾಧ್ಯಕ್ಚರಾದ ರಾಜಾ ಭಿ.ಭೀಮಳ್ಳಿ, ಕಾರ್ಯದರ್ಶಿಗಳಾ ಉದಯಕುಮಾರ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ. ಕೈಲಾಶ್ ಪಾಟೀಲ, ಕಾಲೇಜಿನ ಸಂಯೋಜಕರಾದ ನಾಗಣ್ಣ ಘಂಟಿ, ಸಂಯೋಜನಾ ಸಮಿತಿಯ ಸದಸ್ಯರಾದ ಅರುಣಕುಮಾರ್ ಪಾಟೀಲ, ಅನೀಲಕುಮಾರ ಮರಗೋಳ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿಗಳು ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿನ ಸಂಸ್ಥೆಯ ಕೀರ್ತಿ ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.