ಶ್ರೀಮತಿ ಮಹೇಶ್ವರಿ ಶಿವಕುಮಾರ ವಾಲೆ ಅವರು ಕಲಬುರಗಿ ಜಿಲ್ಲಾ ಜನತಾದಳ (ಜಾತ್ಯಾತೀತ) ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಕ

ಶ್ರೀಮತಿ ಮಹೇಶ್ವರಿ ಶಿವಕುಮಾರ ವಾಲೆ ಅವರು ಕಲಬುರಗಿ ಜಿಲ್ಲಾ ಜನತಾದಳ (ಜಾತ್ಯಾತೀತ) ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಕ

ಶ್ರೀಮತಿ ಮಹೇಶ್ವರಿ ಶಿವಕುಮಾರ ವಾಲಿ ಅವರು ಕಲಬುರಗಿ ಜಿಲ್ಲಾ ಜನತಾದಳ (ಜಾತ್ಯಾತೀತ) ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಕ

ಕಲಬುರಗಿ:ಕಲಬುರಗಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ಮಹೇಶ್ವರಿ ಶಿವಕುಮಾರ ವಾಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ಬಾಲರಾಜ್ ಗುತ್ತೇದ್ದಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹೊಸ ನೇಮಕಾತಿ ಈ ಕೂಡಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಶ್ರೀಮತಿ ಮಹೇಶ್ವರಿ ವಾಲೆ ಅವರು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಬಲವರ್ಧನೆಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆಂದು ಅವರು ಆಶಿಸಿದರು.

ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೊಸ ಅಧ್ಯಕ್ಷೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಗಿದೆ.