ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ವೈಭವದ 70ನೇ ಕರ್ನಾಟಕ ರಾಜ್ಯೋತ್ಸವ
                                ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ವೈಭವದ 70ನೇ ಕರ್ನಾಟಕ ರಾಜ್ಯೋತ್ಸವ
ನಗರದ ವಿದ್ಯಾಪೀಠ ಸಮೀಪದ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ವಿಜಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಆರ್. ವಾದಿರಾಜು ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಶ್ರೀ ಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಎಂ. ರುಕ್ಮಾಂಗದ ನಾಯ್ಡು ಮತ್ತು ಶ್ರೀ ಕೃಷ್ಣ ವಿದ್ಯಾ ಶಾಲೆಯ ಪ್ರಾಂಶುಪಾಲರಾದ ಡಾ. ಪದ್ಮ ನವನೀತ್ ಅವರು ಉಪಸ್ಥಿತರಿದ್ದರು.
