ಕರ್ನಾಟಕ ಮಹಿಳಾ ಪರ ಜನ ಜಾಗೃತಿ ಸಮಿತಿಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅನುರಾಧಾ ಹೆಚ್ ಹೂಗಾರ ನೇಮಕ
ಕರ್ನಾಟಕ ಮಹಿಳಾ ಪರ ಜನ ಜಾಗೃತಿ ಸಮಿತಿಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅನುರಾಧಾ ಹೆಚ್ ಹೂಗಾರ ನೇಮಕ
ಕಲಬುರಗಿ: ಕರ್ನಾಟಕ ಮಹಿಳಾ ಪರ ಜನ ಜಾಗೃತಿ ಸಮಿತಿ ವತಿಯಿಂದ ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ಶ್ರೀಮತಿ ಅನುರಾಧ ಎಚ್.ಹೂಗಾರ ಅವರನ್ನು ನೇಮಕಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷೆ ಶ್ರೀಮತಿ ಜಗದೇವಿ ಆರ್.ಹೆಗಡೆ ಅವರು ತಿಳಿಸಿದ್ದಾರೆ.
ನವೆಂಬರ್ 04 ರಂದು ನಡೆದ ಸಭೆಯಲ್ಲಿ ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷೆ ಶ್ರೀಮತಿ ಜಗದೇವಿ ಆರ್. ಹೆಗಡೆ ರವರ ನೇತೃತ್ವದಲ್ಲಿ ನಡೆದ ಜಿಲ್ಲಾ/ತಾಲೂಕಾ ಸಮಿತಿಯ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಶ್ರೀಮತಿ ಅನುರಾಧಾ ಹೆಚ್.ಹೂಗಾರ ಅವರನ್ನು ನೇಮಕ ಮಾಡಲಾಗಿದೆ ಎಂದರು.
ನಿಯಮನುಸಾರವಾಗಿ ಜಿಲ್ಲೆಯಲ್ಲಿ ಎಲ್ಲಾ ಮಹಿಳೆಯರ ಮೇಲೆ ನಡೆಯುವ ಅನ್ಯಾಯ ಅತ್ಯಾಚಾರ, ಶೋಷಣೆ, ದೌರ್ಜನ್ಯಗಳ ವಿರುದ್ಧದ ಹೊರಾಟದ ಮುಖಾಂತರ ನ್ಯಾಯ ದೊರಕಿಸಿ ಕೊಡಬೇಕು.ಮತ್ತು ಸಂಘಟನೆಯನ್ನು ಜಿಲ್ಲಾ ಮಟ್ಟದಲ್ಲಿ ಬಲಿಷ್ಠಗೊಳಿಸಿ, ಜಿಲ್ಲೆಯ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಇಂದಿನಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷರಾದ ಸುಂದರ ಡಿ ಸಾಗರ,ಭೀಮಶಾ ಧರಣಿ, ಮತ್ತು ಲಕ್ಷ್ಮೀ ಕವಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
