ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವೆ - ರಾಮು ನಾಯಕ

ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವೆ - ರಾಮು ನಾಯಕ

ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವೆ - ರಾಮು ನಾಯಕ

ಶಹಾಪುರ : ನಮ್ಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿ ಕೊಡುವುದರ ಜೊತೆಗೆ ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವೆ ಎಂದು ಕಲ್ಯಾಣ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಯುವ ಘಟಕದ ಅಧ್ಯಕ್ಷ ರಾಮು ನಾಯಕ ಅರಳಹಳ್ಳಿ ಹೇಳಿದರು.

ತಾಲೂಕಿನ ಭೀಮರಾಯನ ಗುಡಿ ಪ್ರವಾಸಿ ಮಂದಿರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ನಮ್ಮ ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ಪ್ರತಿ ಮಗುವಿಗೂ ಪಾಲಕರು ಶಿಕ್ಷಣ ಕೊಡಿಸುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಯಾದಗಿರಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ದೇವು ನಾಯಕ ಗಂಗನಾಳ ಮಾತನಾಡಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಗೂ ಭೇಟಿ ನೀಡಿ

ಪಕ್ಷಭೇದ ಮರೆತು ಸಮಾಜದ ಏಳಿಗೆಗಾಗಿ ಶ್ರಮಿಸುವುದರ ಜೊತೆಗೆ,ಜನರಿಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಹಿರಿಯರಾದ ಚನ್ನಬಸರೆಡ್ಡಿ ಚೆನ್ನೂರ,ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ

ಶಿವಮಹಾಂತಪ್ಪ ಸಾಹು ಚಂದಾಪುರ,ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಹನುಮಂತರಾಯ ದೊರೆ ದಳಪತಿ,ಅಜೀಂ ಹಾಗೂ ಇತರರು ಉಪಸ್ಥಿತರಿದ್ದರು.