ಪೂರ್ವಭಾವಿ ಸಭೆ : ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿ ಆಚರಣೆ :..
ಪೂರ್ವಭಾವಿ ಸಭೆ : ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿ ಆಚರಣೆ :..
ನಾಗರಾಜ್ ದಂಡಾವತಿ ವರದಿ ಶಹಾಬಾದ : - ನ. 8 ರಂದು ನಡೆಯಲಿರುವ ಭಕ್ತ ಕನಕದಾಸರ 538ನೇ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ತಾಲ್ಲೂಕಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಲ್ಲೂಕ ತಹಶೀಲ್ದಾರ ನೀಲಪ್ರಭಾ ಬಬಲಾದ ಅವರು ಸೂಚಿಸಿದರು.
ಅವರು ಭಕ್ತ ಕನಕದಾಸರ ಜಯಂತಿಯ ಪ್ರಯುಕ್ತವಾಗಿ ನ. 8 ರಂದು ನಡೆಯಲಿರುವ ಕಾರ್ಯಕ್ರಮದ ತಯಾರಿ ಹಿನ್ನೆಲೆಯಲ್ಲಿ ತಾಲ್ಲೂಕ ತಹಶೀಲ್ದಾರ ಕಛೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕನಕದಾಸರು ಸಮಾನತೆ, ಭಕ್ತಿ ಹಾಗೂ ಮಾನವೀಯ ಮೌಲ್ಯಗಳ ಸಾರ ನೀಡಿದ ಮಹಾನ್ ದಾಸಸಾಹಿತಿ, ಅವರ ತತ್ವಗಳನ್ನು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿ ಆಚರಣೆಯನ್ನು ಸಾರ್ಥಕಗೊಳಿಸಬೇಕು ಎಂದು ಹೇಳಿದರು.
ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು, ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದರು.
ಕುರುಬ ಸಮಾಜದ ಅಧ್ಯಕ್ಷ ನಿಂಗಣ್ಣ ಪೂಜಾರಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಂಭ್ರಮದಿಂದ ಕನಕದಾಸರ ಜಯಂತಿಯನ್ನು ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿ ಗಳಲ್ಲಿ ಭಕ್ತ ಕನಕದಾಸರ ಭಾವ ಚಿತ್ರವಿಟ್ಟು, ಪೂಜೆ ಸಲ್ಲಿಸಿ ತಪ್ಪದೆ ಆಚರಿಸಬೇಕು, ಅಧಿಕಾರಿಗಳು ಸಹ ಕಾರ್ಯಕ್ರಮಲ್ಲಿ ಭಾಗಿಯಾಗುವಂತೆ ನಿರ್ದೇಶನ ನೀಡಬೇಕು ಮತ್ತು ಜಯಂತಿ ಆಚರಿಸದೆ ಇರುವ ಮತ್ತು ತಪ್ಪಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಭಾಗವಹಿಸಿದ ಸಮುದಾಯದ ಮುಖಂಡರು ಭಕ್ತ ಕನಕದಾಸರ ಜಯಂತಿಯ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಣೆಗೆ ಅನೇಕ ಸಲಹೆ ನೀಡಿದರು.
ಪೂರ್ವ ಭಾವಿ ಸಭೆಯಲ್ಲಿ ಗ್ರೇಡ್ 2 ತಹಶೀಲ್ದಾರ ಗುರುರಾಜ ಸಂಗಾವಿ, ಪೌರಾಯುಕ್ತ ಡಾ. ಕೆ. ಗುರಲಿಂಗಪ್ಪ, ತಾ.ಪಂ ಕಾರ್ಯನಿರ್ವಾಣಾಧಿಕಾರಿ ಮಲ್ಲಿನಾಥ ರಾವೂರ, ಸಮಾಜ ಕಲ್ಯಾಣ ಇಲಾಖೆಯ ರವಿಕುಮಾರ ಮುತ್ತಗಿ, ಕುರುಬ ಸಮಾಜದ ಮಾಜಿ ಅಧ್ಯಕ್ಷ ಮಲ್ಕಣ್ಣ ಮುದ್ದಾ ಸೂರ್ಯಕಾಂತ ಗಿರಣಿ, ವಿಜಯ ಕಂಠಿಕರ ಸೇರಿದಂತೆ ಅನೇಕ ಜನ ಭಾಗವಹಿಸಿದ್ದರು.
