ಬಿಲ್ಲಾಡ್ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮುತ್ತು ಬಡಿಗೇರ್ ಆಕ್ರೋಶ

ಬಿಲ್ಲಾಡ್ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮುತ್ತು ಬಡಿಗೇರ್ ಆಕ್ರೋಶ

ಬಿಲ್ಲಾಡ್ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮುತ್ತು ಬಡಿಗೇರ್ ಆಕ್ರೋಶ

ಕಲಬುರಗಿ : ಜೇವರ್ಗಿ ತಾಲೂಕಿನ ನೇದಲಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲಾಡ್ ಎಸ್.ಸಿ. ವಾರ್ಡಿನಲ್ಲಿ ಕಳೆದ ಹಲವಾರು ದಿನಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಗ್ರಾಮಸ್ಥರು ನೀರಿನ ಕೊರತೆಯಿಂದ ಪರದಾಡುತ್ತಿದ್ದರೂ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲೂಕು ಇ.ಓ.ಗಳು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸ್ಥಳೀಯರಲ್ಲಿ ಅಸಮಾಧಾನ ಹೆಚ್ಚಾಗಿದೆ.

ಈ ಕುರಿತು ಜಾಂಬವ ಯುವಸೇನೆ ತಾಲೂಕು ಪ್ರಧಾನ ಕಾರ್ಯದರ್ಶಿ ಮುತ್ತು ಬಡಿಗೇರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಂಥಾಜ್ ಮಂದಾಪುರ್ ಅವರೊಂದಿಗೆ ಹಾಗೂ ಜೇವರ್ಗಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ (E.O) ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದರೂ, ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಿದರು.

ಮುತ್ತು ಬಡಿಗೇರ್ ಅವರು “ಬಿಲ್ಲಾಡ್ ಗ್ರಾಮದ ಎಸ್.ಸಿ. ವಾರ್ಡಿನ ಜನರು ಕುಡಿಯುವ ನೀರಿನ ಅಭಾವದಿಂದಾಗಿ ತೊಂದರೆ ಉಂಟು ಆಗುತ್ತಿದೆ. ಈ ವಿಷಯವನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ. ಒಂದು ವೇಳೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಗ್ರಾಮಸ್ಥರೊಂದಿಗೆ ಸೇರಿ ತಾಲೂಕು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ,” ಎಂದು ಎಚ್ಚರಿಸಿದರು.

ಗ್ರಾಮಸ್ಥರು ತ್ವರಿತವಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಬೇಕೆಂದು ಬೇಡಿಕೆ ಇಟ್ಟಿದ್ದಾರೆ.