ಮನೆ ಕಳ್ಳತನ ಪ್ರಕರಣ ಭೇದಿಸಿದ ವಿಶ್ವವಿದ್ಯಾಲಯ ಠಾಣೆ ಪೊಲೀಸರು – ರೂ. 13.41 ಲಕ್ಷ ಮೌಲ್ಯದ ಸ್ವತ್ತು ವಶ
ಮನೆ ಕಳ್ಳತನ ಪ್ರಕರಣ ಭೇದಿಸಿದ ವಿಶ್ವವಿದ್ಯಾಲಯ ಠಾಣೆ ಪೊಲೀಸರು – ರೂ. 13.41 ಲಕ್ಷ ಮೌಲ್ಯದ ಸ್ವತ್ತು ವಶ
ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ರೂ. 13,41,000 ಮೌಲ್ಯದ ಕಳವಣಿಗೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನಿಂದ 100 ಗ್ರಾಂ ಬಂಗಾರದ ಆಭರಣಗಳು, 200 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಒಟ್ಟು ರೂ. 13.41 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳಾದ ಡಿ ಜೆ ರಾಜಣ್ಣ, ಸುನಿಲ್ ಕುಮಾರ್, ಸೇರಿದಂತೆ ಅನೇಕ ಅಧಿಕಾರಿಗಳು ಇದ್ದರು.
ನಗರ ಪೊಲೀಸ್ ಆಯುಕ್ತ ಶರಣಪ್ಪ ಅವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ.
