ಸರ್ಕಾರ ರೈತ ಪರ-ಸಕ್ಕರೆ ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕ ಯಂತ್ರ ಅಳವಡಿಕೆ: ಸಿ.ಎಂ ಸಿದ್ದರಾಮಯ್ಯ

ಸರ್ಕಾರ ರೈತ ಪರ-ಸಕ್ಕರೆ ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕ ಯಂತ್ರ ಅಳವಡಿಕೆ: ಸಿ.ಎಂ ಸಿದ್ದರಾಮಯ್ಯ

ಸರ್ಕಾರ ರೈತ ಪರ-ಸಕ್ಕರೆ ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕ ಯಂತ್ರ ಅಳವಡಿಕೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸಚಿವ ಸಂಪುಟ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಕ್ಕರೆ ಕಾರ್ಖಾನೆಗಳಲ್ಲಿ ನಡೆಯುತ್ತಿದ್ದ ತೂಕದ ಮೋಸವನ್ನು ತಡೆಯಲು ಎಲ್ಲಾ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸರ್ಕಾರದ ವತಿಯಿಂದ 11 ಜಾಗಗಳಲ್ಲಿ ಹೊಸ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನಾ ಸಮಿತಿಗಳನ್ನು ರಚಿಸಲಾಗಿದೆ ಎಂದರು.

“ಎಪಿಎಂಸಿಗಳಲ್ಲಿ ಸರ್ಕಾರ ಉಚಿತ ತೂಕ ಯಂತ್ರಗಳನ್ನು ಸ್ಥಾಪಿಸಿದ್ದು, ರೈತರು ಉಚಿತವಾಗಿ ತೂಕ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ” ಎಂದರು 

2024-25ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು ಒಟ್ಟು 522 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ಅರೆದು, ರೈತರಿಗೆ ಎಫ್.ಆರ್.ಪಿ ದರದಂತೆ 18,221.88 ಕೋಟಿ ರೂ. ಪಾವತಿಸಬೇಕಾಗಿತ್ತು. ಆದರೆ ಸಕ್ಕರೆ ಇಳುವರಿ ಹೆಚ್ಚಾದ ಕಾರಣ 19,569.15 ಕೋಟಿ ರೂ. ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು ತಿಳಿಸಿದರು 

 “ನಮ್ಮ ಸರ್ಕಾರ ರೈತ ಪರವಾಗಿದೆ. ವಿರೋಧ ಪಕ್ಷಗಳು ರೈತರ ಮುಗ್ಧತೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದು. ರೈತರು ಬಿ.ಜೆ.ಪಿ.ಯ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು” ಎಂದು ಎಚ್ಚರಿಸಿದರು.

“ನಾಳೆ ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತದೆ. ಎರಡೂ ಕಡೆಯ ಅಹವಾಲುಗಳನ್ನು ಆಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿ ಎಂ ಸಿದ್ದರಾಮಯ್ಯ ತಿಳಿಸಿದರು.

ಕೊನೆಯಲ್ಲಿ ಅವರು, “ರಾಜ್ಯದ ಕಬ್ಬು ಬೆಳೆಗಾರರು ಸರ್ಕಾರದ ಮೇಲೆ ವಿಶ್ವಾಸವಿಡಲಿ, ವಿರೋಧ ಪಕ್ಷಗಳ ರಾಜಕಾರಣಕ್ಕೆ ಬಲಿಯಾಗಬಾರದು” ಎಂದು ಮನವಿ ಮಾಡಿದರು.