ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯಿಂದ ಸುರಕ್ಷತಾ ಕಾರ್ಯಾಗಾರ

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯಿಂದ ಸುರಕ್ಷತಾ ಕಾರ್ಯಾಗಾರ

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯಿಂದ ಸುರಕ್ಷತಾ ಕಾರ್ಯಾಗಾರ

ಕಲಬುರಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಜೆಸ್ಕಾಂ) ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗ–1 ರ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀ ಮುರಗೇಶ ಮಠಪತಿ ಅವರ ನೇತೃತ್ವದಲ್ಲಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ನಿರ್ದೇಶನದನ್ವಯವಾಗಿ ಒಂದು ದಿನದ ಸುರಕ್ಷತಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಈ ಕಾರ್ಯಾಗಾರವನ್ನು ಎಲ್ಲಾ ಪವರ್‌ಮ್ಯಾನ್‌ಗಳಿಗೆ ಉದ್ದೇಶಿಸಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುರಕ್ಷತಾ ನಿಯಮಗಳು, ತಾಂತ್ರಿಕ ಜಾಗೃತಿಯು ಹಾಗೂ ಕಾರ್ಯನಿರ್ವಹಣೆಯಲ್ಲಿ ಎಚ್ಚರಿಕೆ ಕ್ರಮಗಳ ಕುರಿತು ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.