ಬರೂರ ಗಡಿಯಲ್ಲಿ ಕನ್ನಡ ಜಾಗೃತಿ ಸಾಂಸ್ಕೃತಿಕ ಕಾರ್ಯಕ್ರಮ

ಬರೂರ ಗಡಿಯಲ್ಲಿ ಕನ್ನಡ ಜಾಗೃತಿ ಸಾಂಸ್ಕೃತಿಕ ಕಾರ್ಯಕ್ರಮ

ಬರೂರ ಗಡಿಯಲ್ಲಿ ಕನ್ನಡ ಜಾಗೃತಿ ಸಾಂಸ್ಕೃತಿಕ ಕಾರ್ಯಕ್ರಮ

ಬೀದರ,ಬೀದರ ತಾಲೂಕಿನ ಬರೂರ ಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆ (ರಿ), ಯಾಕತಪುರ ಇವರ ವತಿಯಿಂದ “ಕನ್ನಡ ಚಿಂತನೆ – ಕನ್ನಡ ಭಾಷಾ ಜಾಗೃತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ” ಏರ್ಪಡಿಸಲಾಯಿತು.

ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕೃಷ್ಣ ಅವರು ಉದ್ಘಾಟಿಸಿದರು. ಅವರು ಮಾತನಾಡಿ, ಬರೂರ ಗ್ರಾಮವು ತೆಲಂಗಾಣ ಗಡಿಯಲ್ಲಿರುವುದರಿಂದ ಸರ್ಕಾರವು ಶಾಲೆಗೆ ಹೆಚ್ಚಿನ ಸೌಲಭ್ಯ, ಪ್ರೋತ್ಸಾಹ ಹಾಗೂ ಕನ್ನಡ ಪಾಠ್ಯಕ್ರಮ ಬಲವರ್ಧನೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಮಾಕಾಂತ ಶಿವಪೂಜೆ ಅವರು ಕನ್ನಡ ನಾಡಿನ ವೈಶಿಷ್ಟ್ಯವಾದ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವೀರರ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟರು.

ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕುಪೇಂದ್ರ ಎಸ್. ಹೊಸಮನಿ ಅವರು ಮಾತನಾಡಿ,

“ಬರೂರ ಇತಿಹಾಸಪೂರ್ಣ ಗಡಿ ಪ್ರದೇಶವಾದ್ದರಿಂದ ಇಲ್ಲಿ ಕನ್ನಡ ಸಂಶೋಧನಾ ಕೇಂದ್ರಗಳು ಸ್ಥಾಪನೆಗೊಳ್ಳಬೇಕು. ವಿಶೇಷವಾಗಿ ಗಡಿ ಭಾಗದಲ್ಲಿ ಕನ್ನಡದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳನ್ನು ಕಲ್ಪಿಸಬೇಕು” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗೌಸೋದ್ಧಿನ್ ಅವರು ಕನ್ನಡ ಭಾಷಾ ಹೋರಾಟಗಳು, ಭಾಷಾ ಅಸ್ತಿತ್ವ ಮತ್ತು ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಜಗನಾಥ ಕುತ್ತಾ ನಿರೂಪಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಶಿಲ್ಪ, ಸಂಧ್ಯಾ ಕುಮಾರಿ, ಸುವರ್ಣ, ಮಂಗಳಾ, ಡಿ.ಎಂ.ಸಿ ಸಿಬ್ಬಂದಿ, ವಿದ್ಯಾರ್ಥಿಗಳು, ಶಿಕ್ಷಣ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ ಡಾ. ಅವಿನಾಶ .S,D