ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಗಳು ಕಾರ್ಯಕ್ರಮಕ್ಕೆ ಚಾಲನೆ

ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಗಳು ಕಾರ್ಯಕ್ರಮಕ್ಕೆ ಚಾಲನೆ

ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಗಳು ಕಾರ್ಯಕ್ರಮಕ್ಕೆ ಚಾಲನೆ 

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಕಲಬುರಗಿ ಜಿಲ್ಲೆ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಗಳು ಕಾರ್ಯಕ್ರಮಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ್ ಅಕ್ಕಣ್ಣ, ಶ್ರೀ ಗುರು ವಿದ್ಯಾಪೀಠದ ಬಸವರಾಜ ಡಿಗ್ಗಾವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಸರ್ಕಾರಿ ಪದವಿ ಮಹಾವಿದ್ಯಾಲಯ ಸಿಡಿಸಿ ಅಧ್ಯಕ್ಷ ಲಾಲ್ ಅಹ್ಮದ್ ಬಾಂಬೆ ಸೇಠ, ಪದವಿಪೂರ್ವ ವಿಭಾಗ ಎನ್‌ಎಸ್ ಎಸ್ ಅಧಿಕಾರಿ ಡಾ.ಚಂದ್ರಶೇಖರ ದೊಡ್ಡಮನಿ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ ಅಧ್ಯಕ್ಷ ಜೇ ಮಲ್ಲಪ್ಪ, ಬಸವರಾಜ ಬಿರಾಜದಾರ, ಬಿ ಎಚ್ ನಿರಗುಡಿ, ಧರ್ಮರಾಜ ಜವಳಿ, ಬಿ ಎಸ್ ಮಾಲಿಪಾಟೀಲ, ಶ್ರೀಮತಿ ಸವಿತಾ ನಾಶಿ, ಐ ಕೆ ಪಾಟೀಲ್ ಸೇರಿದಂತೆ ಇತರರು ಇದ್ದರು. ದೇವಿದಾಸ ಪವಾರ್ ಕಾರ್ಯಕ್ರಮ ನಿರೂಪಿಸಿದರು. ರಾಜು ಗಂಗಾಧರ ಅವರು ವಂದನಾರ್ಪಣೆ ಮಾಡಿದರು.