ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದಲ್ಲೇ ಹಾಜರಾಗಬೇಕು – ಕೆ.ಆರ್.ಎಸ್ ಪಕ್ಷದ ಮನವಿ
ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದಲ್ಲೇ ಹಾಜರಾಗಬೇಕು – ಕೆ.ಆರ್.ಎಸ್ ಪಕ್ಷದ ಮನವಿ
ಯಡ್ರಾಮಿ: ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ತಮ್ಮ ಗ್ರಾಮದ ಕೇಂದ್ರ ಸ್ಥಳದಲ್ಲೇ ಕೆಲಸ ನಿರ್ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್) ಪಕ್ಷದ ಯಡ್ರಾಮಿ ತಾಲೂಕು ಅಧ್ಯಕ್ಷ ರಿಯಾಜ್‌ಸಾಬ್ ಬಿಳವಾರ ಅವರು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಯಡ್ರಾಮಿ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಬೇರೆಡೆ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಗ್ರಾಮಸ್ಥರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
“ಸರ್ಕಾರವು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದಲ್ಲಿಯೇ ಹಾಜರಿರಬೇಕು ಎಂದು ಸ್ಪಷ್ಟ ನಿರ್ದೇಶ ನೀಡಿದ್ದರೂ, ಈ ಆದೇಶವನ್ನು ಹಲವರು ಉಲ್ಲಂಘಿಸುತ್ತಿದ್ದಾರೆ. ಕೂಡಲೇ ಈ ಅವ್ಯವಸ್ಥೆಯನ್ನು ಸರಿಪಡಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೆ.ಆರ್.ಎಸ್ ಪಕ್ಷದ ವತಿಯಿಂದ ತೀವ್ರ ಹೋರಾಟ ನಡೆಸಲಾಗುವುದು,” ಎಂದು ರಿಯಾಜ್‌ಸಾಬ್ ಬಿಳವಾರ ಎಚ್ಚರಿಕೆ ನೀಡಿದರು.
ವರದಿ: ಸಿದ್ಧಲಿಂಗ ಎಚ್. ಹಾಲಗಡ್ಲಾ ಪೂಜಾರಿ
