"ಗಡಿನಾಡಿನಲ್ಲಿ ಕನ್ನಡ ಡಿಂಡಿಮ" ಚಂದನದಲ್ಲಿ ನ .15ರಂದು ವಿಶೇಷ ಸಂವಾದ
"ಗಡಿನಾಡಿನಲ್ಲಿ ಕನ್ನಡ ಡಿಂಡಿಮ" ಚಂದನದಲ್ಲಿ ನ .15ರಂದು ವಿಶೇಷ ಸಂವಾದ
ಕಲಬರಗಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ದೂರದರ್ಶನ ಕೇಂದ್ರವು ಸಿದ್ಧಪಡಿಸಿದ ವಿಶೇಷ ಸಂವಾದ ಕಾರ್ಯಕ್ರಮ "ಬಾರಿಸು ಕನ್ನಡ ಡಿಂಡಿಮ " ಚಂದನ ವಾಹಿನಿಯಲ್ಲಿ ನವೆಂಬರ್ 15 ರಂದು ಮಧ್ಯಾಹ್ನ 2:30ಕ್ಕೆ ಪ್ರಸಾರವಾಗಲಿದೆ.
ಗಡಿನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ ಮುಂತಾದ ಪ್ರದೇಶಗಳಲ್ಲಿ ಕನ್ನಡವನ್ನು ಕಟ್ಟುವ ಕಾಯಕದ ಬಗ್ಗೆ ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಚನ್ನಶೆಟ್ಟಿ ಮತ್ತು ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿಜಯಕುಮಾರ್ ತೇಗಲತಿಪ್ಪಿ ಅವರೊಡನೆ ನಡೆಸಿದ ಸಂವಾದ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಸಂವಾದವನ್ನು ಡಾ. ಸದಾನಂದ ಪೆರ್ಲ ನಡೆಸಿಕೊಟ್ಟಿದ್ದಾರೆ.
ಈ ಕಾರ್ಯಕ್ರಮವನ್ನು ದೂರದರ್ಶನ ಕೇಂದ್ರದ ನಿರ್ಮಾಪಕರಾದ ಸಂಗಮೇಶ್ ಮತ್ತು ಮಲ್ಲಿಕಾರ್ಜುನ್ ನಿರ್ಮಾಣ ಮಾಡಿದ್ದಾರೆ. ತಾಂತ್ರಿಕ ಸಿಬ್ಬಂದಿ ವರ್ಗ ನೆರವಾಗಿದೆ. ಆಸಕ್ತ ವೀಕ್ಷಕರು ಕಾರ್ಯಕ್ರಮವನ್ನು ನೋಡಿ ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕಾಗಿ ದೂರದರ್ಶನ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
