ಆಡಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಸಂಭ್ರಮ
ಆಡಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಸಂಭ್ರಮ
ಕಲಬುರಗಿ ತಾಲ್ಲೂಕಿನ ಆಡಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ನ.14, 2025 ರಂದು ಪೋಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಭವ್ಯವಾಗಿ ಜರುಗಿತು.
ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ಚೆನ್ನಣ್ಣ ರಾಯಪ್ಪ, ಬಿ.ಇ.ಓ ಶ್ರೀ ಮಾರುತಿ ಹುಜುರಾತಿ, ಮುಖ್ಯ ಗುರುಗಳಾದ ಶ್ರೀ ಕಿಷ್ಟಪ್ಪ ಮುನ್ನೂರ ಸೇರಿದಂತೆ ಗಣ್ಯರು ಅತಿಥಿಗಳಾಗಿ ಹಾಜರಿದ್ದರು. ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷ ಶ್ರೀ ಗೋವಿಂದ ಹಾಗೂ ಶಾಲಾ ಸಂಸತ್ತಿನಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕರಾದ ಲೀಲಾದೇವಿ, ನರಸಿಂಹಲು, ರಾಜೇಶ್ವರಿ, ಗಿರೀಜಾ, ಬಾಲಕೀಷನ್ ಹಾಗೂ ಸುಮಾರು 70–80 ಮಂದಿ ಪೋಷಕರು, ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಚಂದ್ರಕಲಾ ಎಂ. ಪಾಟೀಲ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಶಿವಾನಂದ ಸ್ವಾಗತಿಸಿ, ಪುಷ್ಪಾ ಮಕ್ಕಳೆಂದರೆ ಎಂಬ ಹೃದಯಸ್ಪರ್ಶಿ ಗೀತೆಯನ್ನು ಹಾಡಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಟಿಪಿಎಸ್‌ಇಓ ಶ್ರೀ ಚೆನ್ನಣ್ಣ ರಾಯಪ್ಪ, ಮಕ್ಕಳ ಅಭಿವೃದ್ದಿ, ಶಿಕ್ಷಣದ ಗುಣಮಟ್ಟ ಮತ್ತು ಪೋಷಕರ ಪಾತ್ರ ಕುರಿತು ಪ್ರೇರಣಾದಾಯಕ ಮಾತುಗಳನ್ನು ಹಂಚಿಕೊಂಡರು. ಬಿ.ಇ.ಓ ಶ್ರೀ ಮಾರುತಿ ಹುಜುರಾತಿ ಮಕ್ಕಳು ಪರಿಶ್ರಮ, ಶಿಸ್ತು ಹಾಗೂ ಗುರಿನಿರ್ಧಾರದಿಂದ ಜೀವನದಲ್ಲಿ ಮುನ್ನಡೆಯಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಆಟ-ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಲ್ಲಾ ಮಕ್ಕಳಿಗೆ ಪೆನ್, ಕೇಕ್ ಹಾಗೂ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.
ಶಾಲೆಯ ಎಲ್ಲಾ ಶಿಕ್ಷಕರ ಸಹಕಾರದಿಂದ ಪೋಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
