ಮಕ್ಕಳ ದಿನಾಚರಣೆ: ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಪೆನ್–ಪುಸ್ತಕ ವಿತರಣೆ
ಮಕ್ಕಳ ದಿನಾಚರಣೆ: ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಪೆನ್–ಪುಸ್ತಕ ವಿತರಣೆ
ಕಲಬುರಗಿ:ನಗರದ ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಮಕ್ಕಳು ದಿನಾಚರಣೆಯನ್ನು ಸಾರ್ಥಕವಾಗಿ ಆಚರಿಸಲಾಯಿತು. ಪಂಡಿತ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.
ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಪೆನ್ಸ್ ಮತ್ತು ಪುಸ್ತಕಗಳನ್ನು ವಿತರಿಸಿ ಶಿಕ್ಷಣದ ಮಹತ್ವವನ್ನು ತಿಳಿಸಲಾಯಿತು. ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
