ಅಹೋರಾತ್ರಿ ಧರಣಿ ಸತ್ಯಾಗ್ರಹ ಹಿಂದಕ್ಕೆ
ಅಹೋರಾತ್ರಿ ಧರಣಿ ಸತ್ಯಾಗ್ರಹ ಹಿಂದಕ್ಕೆ
ಕಲಬುರಗಿ: ದೇವದಾಸಿ ಮಹಿಳೆಯರು ಮತ್ತು ಅವರ ಕುಟುಂಬದ ಮೂರು ತಲೆಮಾರಿಗೂ ಗಣತಿ ಅನ್ವಯಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಿನ್ನೆಯಿಂದ ಜಗತ್ ವೃತ್ತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.
ಧರಣಿ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ, ದೇವದಾಸಿ ಅಭಿವೃದ್ಧಿ ನಿಗಮದ ದೇವದಾಸಿ ಅನುಷ್ಠಾನ ಅಧಿಕಾರಿ ಶಾಂತಲಾ ಅವರು ಆಗಮಿಸಿ, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರದಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ದೇವದಾಸಿ ಮುಖಂಡರ ಸಭೆ ಕರೆದು ಪರಿಹಾರ ಕೋಡಲಾಗುವುದು ಎಂದು ಭರವಸೆ ನೀಡಿದರು. ದೇವದಾಸಿ ಮಹಿಳೆಯರ ಸರ್ಕಾರ ಮಟ್ಟದ ಬೇಡಿಕೆಗಳ ಮನವಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಅಧಿಕಾರಿಗಳ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಹಿಂದಕ್ಕೆ ಪಡೆಯಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ಜಿಲ್ಲಾ ಅಧ್ಯಕ್ಷೆ ಚಂದಮ್ಮ ಗೋಳಾ, ಗೌರವಾಧ್ಯಕ್ಷ ಸುಧಾಮ ಧನ್ನಿ, ಜನವಾದಿ ಮಹಿಳಾ ಸಂಘಟನೆ ಮುಖಂಡರಾದ ಕೆ. ನೀಲಾ, ಮೀನಾಕ್ಷಿ ಬಾಳಿ, ದೇವದಾಸಿ ಮುಖಂಡರಾದ ಸುಧಾಮ ಧನ್ನಿ, ಪಾಂಡುರAಗ ಮಾವಿನಕರ, ಶೋಭಾ ತೆಗನೂರ, ಶೈಲಾಬಾಯಿ ಹಡಲಗಿ, ಮಹಾಪೂರಿ ಗೊಬ್ಬುರ, ಶರಣಮ್ಮ ಹನುಮನಗರ, ಯಲ್ಲಮ್ಮ ನೀಲೂರ ಸೇರಿದಂತೆ ಇತರರು ಇದ್ದರು
.
