ಎಚ್ ಕೆ ಇ ನರ್ಸಿಂಗ್ ಕಾಲೇಜಿನಲ್ಲಿ ಸಮುದಾಯ ಪೋಸ್ಟಿಂಗ್ ವರದಿ ಕಾರ್ಯಕ್ರಮ
ಎಚ್ ಕೆ ಇ ನರ್ಸಿಂಗ್ ಕಾಲೇಜಿನಲ್ಲಿ ಸಮುದಾಯ ಪೋಸ್ಟಿಂಗ್ ವರದಿ ಕಾರ್ಯಕ್ರಮ
ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಚ್ ಕೆ ಇ ನರ್ಸಿಂಗ್ ಕಾಲೇಜಿನಲ್ಲಿ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದಿಂದ ಸಮುದಾಯ ಪೋಸ್ಟಿಂಗ್ ಸಮೀಕ್ಷೆ ವರದಿ ಸಲ್ಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ನರ್ಸಿಂಗ್ ಕಾಲೇಜಿನ ಡೀನ್ ಡಾ.ಪೂರ್ಣಿಮಾ ಕೊರವಾರ ಮತ್ತು ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಮಹಾದೇವ್ ಎ ಗೋಡಿ ಉದ್ಘಾಟಿಸಿದರು. ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಶೇಕ್ ಮೊಹಿಯುದ್ದೀನ್ ಮತ್ತು ನರ್ಸಿಂಗ್ ಶಾಲೆಯ ಪ್ರಾಂಶುಪಾಲ ಶ್ರೀ ಚೇತನ್ ಸಜ್ಜನ್, ಸಹಾಯಕ ಪ್ರಾಧ್ಯಾಪಕಿ ಭಾಗ್ಯಶ್ರೀ ತಡ್ಕಲ್ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
