ಕರ್ನಾಟಕದ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳು ಆಡಳಿತ ಮಂಡಳಿಗಳ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಬೆಂಬಲ
ಕರ್ನಾಟಕದ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳು ಆಡಳಿತ ಮಂಡಳಿಗಳ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಬೆಂಬಲ
ಕಲಬುರ್ಗಿ: ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳು ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಇಂದಿನಿಂದ ಮಠಾಧೀಶರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು ಇವರ ನ್ಯಾಯಯುತ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ತಿಳಿಸಿದ್ದಾರೆ.
1995 ರಿ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳ ಸ್ಥಿತಿ ಚಿಂತಾಜನಕ ವಾಗಿದ್ದು, ಕಳೆದ 30 ವರ್ಷಗಳಿಂದ ಅನುದಾನ ವಿಲ್ಲದೆ ಮುಚ್ಚುವ ಹಂತದಲ್ಲಿವೆ ಇಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರು ನಿವೃತ್ತಿ ಅಂಚಿನಲ್ಲಿ ಇದ್ದಾರೆ. ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಈ ಶಾಲೆಗಳ ಬಡ ಮಕ್ಕಳಿಗೆ ಯಾವ ಸೌಲಭ್ಯಗಳನ್ನು ನೀಡುತ್ತಿಲ್ಲ. ಕರ್ನಾಟಕದಲ್ಲಿ ಕನ್ನಡ ಮಾಧ್ಯಮದ ಇಂತಹ ಶಾಲಾ ಕಾಲೇಜುಗಳು ಅಳಿದು ಹೋಗುವ ಪರಿಸ್ಥಿತಿ ಇದೆ.ಕಾಂಗ್ರೇಸ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅನುದಾನ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದು ಈಗ ಅದನ್ನು ಮರೆತಿರುವದು ಖಂಡನೀಯ ಕೂಡಲೆ ರಾಜ್ಯ ಸರ್ಕಾರ ಅನುದಾನ ರಹಿತ ಶಾಲಾ ಕಾಲೇಜುಗಳು ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದ್ದಾರೆ
