ನರೇಗಲ್ಲದಲ್ಲಿ ನಾಗದೇವರಿಗೆ ಕಾರ್ತಿಕ ದೀಪೋತ್ಸವ ಸಂಭ್ರಮ

ನರೇಗಲ್ಲದಲ್ಲಿ ನಾಗದೇವರಿಗೆ ಕಾರ್ತಿಕ ದೀಪೋತ್ಸವ ಸಂಭ್ರಮ

ನರೇಗಲ್ಲದಲ್ಲಿ ನಾಗದೇವರಿಗೆ ಕಾರ್ತಿಕ ದೀಪೋತ್ಸವ ಸಂಭ್ರಮ

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಈಟಿಯವರ ಓಣಿಯಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ನಾಗದೇವರಿಗೆ ದೀಪೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಓಣಿಯ ಹಿರಿಯರು, ತಾಯಂದಿರು ಹಾಗೂ ಮಕ್ಕಳು ಸಾಂಪ್ರದಾಯಿಕ ರೀತಿಯಲ್ಲಿ ನಾಗದೇವರಿಗೆ ಪೂಜೆ ಸಲ್ಲಿಸಿ ದೀಪ ಹಚ್ಚುವ ಮೂಲಕ ಕಾರ್ತಿಕ ದೀಪೋತ್ಸವಕ್ಕೆ ಶೋಭೆ ಹೆಚ್ಚಿಸಿದರು. ಭಕ್ತರು ದೇವರ ಬಳಿಯಲ್ಲಿ ಆರೋಗ್ಯ, ಐಶ್ವರ್ಯ ಹಾಗೂ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಪೂಜಾ ಕಾರ್ಯಕ್ರಮದ ಬಳಿಕ ಭಕ್ತರು ಪ್ರಸಾದವನ್ನು ಸ್ವೀಕರಿಸಿ ಧಾರ್ಮಿಕ ಸಂಭ್ರಮದಲ್ಲಿ ಪಾಲ್ಗೊಂಡರು.

ವರದಿ: ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ, ಕಲ್ಯಾಣ ಕಹಳೆ, ಗದಗ