ಉಪನ್ಯಾಸಕಿ ಸರೋಜಾದೇವಿ ಪಾಟೀಲರಿಗೆ ಎಚ್ ಕೆ ಇ ಸಂಸ್ಥೆಯಿಂದ ಸನ್ಮಾನ
ಉಪನ್ಯಾಸಕಿ ಸರೋಜಾದೇವಿ ಪಾಟೀಲರಿಗೆ ಎಚ್ ಕೆ ಇ ಸಂಸ್ಥೆಯಿಂದ ಸನ್ಮಾನ
ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ಸರೋಜಾದೇವಿ ಪಾಟೀಲ್ ಅವರಿಗೆ ಕರ್ನಾಟಕ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಅಂತಾರಾಷ್ಟ್ರೀಯ ಶಿಕ್ಷಕರ ದಿನಾಚರಣೆ ನಿಮಿತ್ತ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ರತ್ನ ಪ್ರಶಸ್ತಿ ದೊರೆತಿರುವುದರಿಂದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹಾಗೂ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿಯ ಸದಸ್ಯರು ಸಂಸ್ಥೆಯ ಪರವಾಗಿ ಸನ್ಮಾನಿಸಿದರು.
