ಇನ್ಪೋಸಿಸ್ ಕ್ಯಾಂಪಸ್ ಸಂದರ್ಶನದಲ್ಲಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಇನ್ಪೋಸಿಸ್ ಕ್ಯಾಂಪಸ್ ಸಂದರ್ಶನದಲ್ಲಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಇನ್ಪೋಸಿಸ್ ಕ್ಯಾಂಪಸ್ ಸಂದರ್ಶನದಲ್ಲಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ 6 ವಿದ್ಯಾರ್ಥಿಗಳು ಇನ್ಪೋಸಿಸ್ ಕಂಪನಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 298 ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಮಾಡುತ್ತಿದ್ದಾರೆ.

ಈ ಬಾರಿಯ ಕ್ಯಾಂಪಸ್ ಸಂದರ್ಶನದಲ್ಲಿ ಸಿಸಿಟಿ ವಿಭಾಗದ ಒಬ್ಬ ವಿದ್ಯಾರ್ಥಿ 7.3 ಲಕ್ಷ ಪ್ಯಾಕೇಜ್ ನೊಂದಿಗೆ ಉದ್ಯೋಗ ಪಡೆದುಕೊಂಡು ಸಾಧನೆ ಮಾಡಿದ್ದಾನೆ.

ಈ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ಶ್ರೀ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಶ್ರೀ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರಾದ ಡಾ ಎಸ್ ಆರ್ ಪಾಟೀಲ್ ಉಪ ಪ್ರಾಚಾರ್ಯರಾದ ಡಾ ಎಸ್ ಆರ್ ಹೊಟ್ಟೆ, ಡಾ ಭಾರತಿ ಹರಸೂರ ಹಾಗೂ ಡಾ ನಾಗೇಶ್ ಸಾಲಿಮಠ ಅಭಿನಂದಿಸಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಶ್ರೀ ಐ ಕೆ ಪಾಟೀಲ್ ತಿಳಿಸಿದ್ದಾರೆ.