ಬಿಳವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿ
ಬಿಳವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿ
ಯಡ್ರಾಮಿ ತಾಲ್ಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆಯ ಅರಿವು ಮೂಡಿಸುವ ಮತ್ತು ದೈಹಿಕ-ಮಾನಸಿಕ ಸಾಮರ್ಥ್ಯ ವೃದ್ಧಿ ಮಾಡುವ ಉದ್ದೇಶದಿಂದ ಕರಾಟೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸೇನಸೈ ಶಾಂತಪ್ಪ ಮಾಸ್ಟರ್ ದೇವರಮನಿ ಅವರು ವಿದ್ಯಾರ್ಥಿನಿಯರಿಗೆ ಕರಾಟೆಯ ಮೂಲತತ್ವಗಳು, ತುರ್ತು ಸಂದರ್ಭಗಳಲ್ಲಿ ತಾನು ತಾನು ರಕ್ಷಿಸಿಕೊಳ್ಳುವ ವಿಧಾನಗಳು ಸೇರಿದಂತೆ ವಿವಿಧ ಕೌಶಲ್ಯಗಳನ್ನು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಮುದುಕಪ್ಪ ಸರ್ ಮಾತನಾಡಿ, “ಇಂದಿನ ದಿನಮಾನಗಳಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳ ಮತ್ತು ಅಮಾನುಷ ಘಟನೆಗಳನ್ನು ತಡೆಯಲು ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಸ್ವಯಂ ರಕ್ಷಣಾ ಕೌಶಲ್ಯಗಳನ್ನು ಕಲಿತು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದು ಅಗತ್ಯ. ಕರಾಟೆ ತರಬೇತಿ ದೈಹಿಕ ಬಲ ಮಾತ್ರವಲ್ಲ, ಮಾನಸಿಕ ಧೈರ್ಯವನ್ನೂ ನೀಡುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು” ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಮಾಹಿತಿ ನೀಡಿದ ನಿಜಲಿಂಗಪ್ಪ ಮಾನ್ವಿ ಶಿಕ್ಷಕರು, ಈ ತರಬೇತಿಯಿಂದ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ, ಶಿಸ್ತಿನ ಭಾವನೆ ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೆಚ್ಚಲಿದೆ ಎಂದು ತಿಳಿಸಿದರು.
ವರದಿ: ಜೇಟ್ಟೆಪ್ಪ ಎಸ್. ಪೂಜಾರಿ
