ಕಲಬುರಗಿ: ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ಶರಣ ಪ್ರಕಾಶ್ ಪಾಟೀಲ್
ಕಲಬುರಗಿ: ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ಶರಣ ಪ್ರಕಾಶ್ ಪಾಟೀಲ್
ಕಲಬುರಗಿ, ನವೆಂಬರ್ 22:“ಕರ್ನಾಟಕದ ಅತ್ಯುತ್ತಮ ಸ್ಥಳಗಳಲ್ಲಿ ಕಲಬುರಗಿ ಪ್ರಮುಖ ಸ್ಥಾನ ಪಡೆದಿದೆ. ನಮ್ಮ ಜಿಲ್ಲೆ ಇತಿಹಾಸ, ಸಂಸ್ಕೃತಿ, ರಾಜ್ಯಮನೆತನಗಳ ಪರಂಪರೆ, ಮಳಖೇಡ (ಮಾನ್ಯಖೇಡ) ಮಹತ್ವದ ರಾಜಧಾನಿಗಳ ಗೌರವ ಹೊಂದಿರುವ ಪ್ರದೇಶ. ಈ ನೆಲೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದೇ ನನ್ನ ಗುರಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ನಗರದಲ್ಲಿ ನಡೆದ ವೈದ್ಯಕೀಯ ಸಮಾವೇಶದಲ್ಲಿ ಮಾತನಾಡಿದ ಅವರು,“ನಾನು ರಾಜಕಾರಣಿಯಾಗಿದ್ದರೂ ಮೊದಲು ವೈದ್ಯ. ವೈದ್ಯರಾಗಿ ನನ್ನ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೆ ಉತ್ತಮ ಆರೋಗ್ಯ ಸೇವೆ ಸಿಕ್ಕಬೇಕು ಎಂಬುದು ನನ್ನ ಮೊದಲ ಆದ್ಯತೆ. ನಮ್ಮ ಜನರು ಬೇರೆ ಜಿಲ್ಲೆಗಳಿಗೆ ಚಿಕಿತ್ಸೆಗಾಗಿ ತೆರಳಬಾರದು ಕಲಬುರ್ಗಿಯಲ್ಲಿ ಸಂಪೂರ್ಣ ವೈದ್ಯಕೀಯ ಹಬ್ಬವಾಗಿ ಅಭಿವೃದ್ಧಿಪಡಿಸುತ್ತಿದ್ದೇವೆ” ಎಂದು ಹೇಳಿದರು.
“ನಮ್ಮ ಭಾಗದ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ. ಹೇಗೆ ಉತ್ತಮ ಆರೋಗ್ಯ ವ್ಯವಸ್ಥೆ ನಿರ್ಮಿಸಬಹುದು ಎಂಬುದಕ್ಕಾಗಿ ಅನೇಕ ಅಧ್ಯಯನ ಪತ್ರಗಳ, ವರದಿಗಳನ್ನು ತಂದಿದ್ದೇನೆ. ಜಿಲ್ಲೆಯಲ್ಲಿ ಉನ್ನತ ಮಟ್ಟದ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ವಿಭಾಗಗಳು, ಆಧುನಿಕ ಯಂತ್ರೋಪಕರಣಗಳು ಮತ್ತು ತುರ್ತು ಚಿಕಿತ್ಸೆ ಸೌಲಭ್ಯಗಳು ಎಲ್ಲವೂ ಸಿಗುವಂತೆ ಯೋಜನೆ ರೂಪಿಸಲಾಗಿದೆ” ಎಂದು ತಿಳಿಸಿದರು.
ಸಮಾವೇಶದಲ್ಲಿ ಭಾಗವಹಿಸಿದ್ದ ನೂರಾರು ವೈದ್ಯರು ಪರಸ್ಪರ ಜ್ಞಾನ ಹಂಚಿಕೊಳ್ಳುವ, ಹೊಸ ವೈದ್ಯಕೀಯ ತಂತ್ರಜ್ಞಾನಗಳ ಕುರಿತು ಚರ್ಚಿಸಿಕೊಳ್ಳುವ ಮತ್ತು ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚಿಸಲು ಸಲಹೆ ನೀಡುವ ಅವಕಾಶ ಸಿಕ್ಕಿತೆಂದು ಸಂತೋಷ ವ್ಯಕ್ತಪಡಿಸಿದರು.
“ಕಲಬುರಗಿಯನ್ನು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಕೇಂದ್ರವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ. 371 ಹಾಸಿಗೆ ಉಳ್ಳ ಜಯದೇವ ಆಸ್ಪತ್ರೆ ಕೂಡ ನಿರ್ಮಾಣ ಮಾಡಲಾಗಿದೆ.ಮತ್ತು
ಬೇಡಿಕೆಯಿದ್ದೆಲ್ಲೆಡೆ ಹೊಸ ಆಸ್ಪತ್ರೆಗಳು, ವೈದ್ಯರ ನೇಮಕಾತಿ, ಮೂಲಸೌಕರ್ಯ ವಿಸ್ತರಣೆ, ಜನಸಾಮಾನ್ಯರಿಗೆ ಸುಲಭವಾಗಿ ತಲುಪುವಂತಹ ಸೇವಾ ವ್ಯವಸ್ಥೆ ರೂಪಿಸಲಾಗುತ್ತಿದೆ” ಎಂದು ಭರವಸೆ ನೀಡಿದರು.
ವೈದ್ಯಕೀಯ ಕ್ಷೇತ್ರದ ತಜ್ಞರು, ಹಿರಿಯ ವೈದ್ಯರು, ಯುವ ವೈದ್ಯರು, ವಿವಿಧ ಆಸ್ಪತ್ರೆಗಳ ಪ್ರತಿನಿಧಿಗಳು, ಕಾಲೇಜು ಅಧ್ಯಾಪಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
