ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತದಲ್ಲಿ ಉದ್ಯೋಗ ಮೇಳ ಯಶಸ್ವಿ

ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತದಲ್ಲಿ ಉದ್ಯೋಗ ಮೇಳ ಯಶಸ್ವಿ

ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತದಲ್ಲಿ ಉದ್ಯೋಗ ಮೇಳ ಯಶಸ್ವಿ

ಕಲಬುರಗಿ: ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತದಲ್ಲಿ ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಯಿತು. 

ಈ ಕಾರ್ಯಕ್ರಮಕ್ಕೆ ಪ್ರಾದೇಶಿಕ ಕಚೇರಿ ಕಾಲೇಜ್ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ಶಿವಶರಣಪ್ಪ ಗೊಳ್ಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಕಾರ್ಯಕ್ರಮಕ್ಕೆ ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಪ್ರೊ. ಶೋಭಾಜಿ ಅವರು ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಕಾರ್ಯ ನಿರ್ವಹಣಾ ನಿರ್ದೇಶಕಿ ಶ್ರೀಮತಿ ಸುಮತಿ ಬಿಎಸ್ ಅವರು ಕಾರ್ಯಕ್ರಮಕ್ಕೆ ಆನ್ಲೈನ್ ಮೂಲಕ ಶುಭಕೋರಿದರು.

ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತದ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅವರು ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ವಿವಿಧ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ಕಾಲೇಜಿನ ಎಲ್ಲ ಪ್ರಾಧ್ಯಾಪಕ ವೃಂದದವರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿದ್ದವು. ವಿದ್ಯಾರ್ಥಿಗಳಿಗೆ ಅವರ ಪದವಿ, ಕೌಶಲ್ಯಗಳಿಗೆ ತಕ್ಕಂತೆ ಉದ್ಯೋಗದ ಅವಕಾಶಗಳನ್ನು ನೀಡಿದವು. ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಹೊಸ ಅವಕಾಶಗಳನ್ನು ಕಲಿತರೆಂಬುದಾಗಿ ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

2023.24 ಮತ್ತು 2024.25 ಶೈಕ್ಷಣಿಕ ವರ್ಷಗಳಲ್ಲಿ ಕಲಿಕೆ ಜೊತೆಗೆ ಕೌಶಲ್ಯ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.