ವಿಜಯಪುರದ ಕುಮಾರ ನೀಲಕಂಠಯ್ಯ ಹಿರೇಮಠ ರಾಜ್ಯಮಟ್ಟಕ್ಕೆ ಆಯ್ಕೆ

ವಿಜಯಪುರದ ಕುಮಾರ ನೀಲಕಂಠಯ್ಯ ಹಿರೇಮಠ ರಾಜ್ಯಮಟ್ಟಕ್ಕೆ ಆಯ್ಕೆ

ವಿಜಯಪುರದ ಕುಮಾರ ನೀಲಕಂಠಯ್ಯ ಹಿರೇಮಠ ರಾಜ್ಯಮಟ್ಟಕ್ಕೆ ಆಯ್ಕೆ

ವಿಜಯಪುರ : ಸಂವಿಧಾನ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ “ನನ್ನ ಮತ ನನ್ನ ಹಕ್ಕು” ವಿಷಯಾಧಾರಿತ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ನೀಲಕಂಠಯ್ಯ ಹಿರೇಮಠ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈ ಸಾಧನೆ ಹಿನ್ನೆಲೆಯಲ್ಲಿ ವಿಜಯಪುರದ ಕಂದಗಲ್ಲ ಹಣಮಂತ್ರಾಯ ರಂಗಮಂದಿರದಲ್ಲಿ ಜರುಗಿದ “ಸಂವಿಧಾನ ದಿನ – 2025” ವಿಶೇಷ ಕಾರ್ಯಕ್ರಮದಲ್ಲಿ ಆಯ್ಕೆಯಾದ ವಿದ್ಯಾರ್ಥಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ವರದಿ : ಸತೀಶ ಕೇಮಶೆಟ್ಟಿ