ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗಲಿ: ನಾಗೇಂದ್ರ ಮಾನೆ
ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗಲಿ: ನಾಗೇಂದ್ರ ಮಾನೆ.
ಆಳಂದ ಮತಕ್ಷೇತ್ರದ ನಿವಾಸಿಯಾದ ನಾಗೇಂದ್ರ ಮಾನೆ ರವರು ಶ್ರೀ ಡಿಕೆ ಶಿವಕುಮಾರ್ ಅವರ ಪಕ್ಷದ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಹೈಕಮಾಂಡ DK ಶಿವಕುಮಾರ ರವರನ್ನು ಮುಖ್ಯಮಂತ್ರಿ ಮಾಡದೆ ಹೋದರೆ ಮೂಲ ಕಾಂಗ್ರೆಸ್ಸಿಗರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ಡಿಕೆ ಶಿವಕುಮಾರ್ ರವರು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಪಕ್ಷಕ್ಕಾಗಿ ತನು ಮನ ಧನ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೂ ಪಕ್ಷಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರದಿಂದ ನಾನಾ ರೀತಿಯ ತೊಂದರೆಗಳು ಅನುಭವಿಸಿದ್ದಾರೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ರಾಜ್ಯದಲ್ಲಿ ನೆಲಕಚ್ಚಿದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ ಕಾರ್ಯಕರ್ತರಿಗೆ ಶಕ್ತಿ ನೀಡಿ ವಿಶೇಷವಾಗಿ ಯುವಕರಿಗೆ ಹೆಚ್ಚಿಗೆ ಆದ್ಯತೆ ನೀಡಿ ಎಲ್ಲಾ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಲವಾರು ಕಾರ್ಯ ತಂತ್ರಗಳ ಮೂಲಕ ಪಕ್ಷ ಬಲವರ್ಧನೆಗೊಳಿಸಿ 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ 138 ಸೀಟುಗಳು ಗೆಲ್ಲುವುದರ ಮೂಲಕ ಐತಿಹಾಸಿಕ ದಾಖಲೆ ಮಾಡಿದ್ದಾರೆ ಹಾಗಾಗಿ ಮಾನ್ಯ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಒತ್ತಾಯಿಸುತ್ತೇನೆ
ಒಂದು ವೇಳೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಯನ್ನಾಗಿ ಮಾಡದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ದುರ್ಬಲವಾಗುತ್ತದೆ 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ಹೈ ಕಮಾಂಡವು ಗಂಭೀರವಾಗಿ ಪರಿಗಣಿಸಿ ಮಾನ್ಯ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ.
ಶ್ರೀ ನಾಗೇಂದ್ರ ಮಾನೆ ಪ್ರಾಧ್ಯಾಪಕರು SHES ಬಿ.ಎಡ ಕಾಲೇಜ್ ಕಲಬುರಗಿ
