ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆಗಿ ಹೊರಹೊಮ್ಮಿದ ಎಂ ಆರ್ ಎಂ ಸಿ ವಿದ್ಯಾರ್ಥಿನಿಯರು

ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆಗಿ ಹೊರಹೊಮ್ಮಿದ ಎಂ ಆರ್ ಎಂ ಸಿ ವಿದ್ಯಾರ್ಥಿನಿಯರು

ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆಗಿ ಹೊರಹೊಮ್ಮಿದ ಎಂ ಆರ್ ಎಂ ಸಿ ವಿದ್ಯಾರ್ಥಿನಿಯರು

ಕಲಬುರ್ಗಿ: ದಾವಣಗೆರೆಯ ಜೆ ಜೆ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯಗಳ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಡಾ ಗೌತಮಿ (ಡರ್ಮಿಟೋಲಾಜಿ ಪಿ ಜಿ), ಡಾ ಮೇಧಾ (ಇಂಟರ್ನ್ಶಿಪ್), ಡಾ ಅನಮ್ (ಇಂಟರ್ನ್ಶಿಪ್), ಡಾ ನಮ್ರತಾ ಇವರುಗಳು ತಂಡವು ರಾಜ್ಯ ಮಟ್ಟದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಇವರ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ಕಮ್ಯೂನಿಟಿ ಮೇಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ ಸುನೀಲ್ ದೇಶಮುಖ್ ಕಾಲೇಜಿನ ದೈಹಿಕ ನಿರ್ದೇಶಕರಾದ ಕಿರಣ್ ಹಾಲಪ್ಪನವರ ವಿಜೇತ ತಂಡಕ್ಕೆ ಶುಭ ಹಾರೈಸಿದ್ದಾರೆ.