ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ
ಸಮನ್ವಯ ಸೇವಾ ಸಂಸ್ಥೆ(ರಿ) ಕಿಲ್ಲನಕೇರಾ- ಯಾದಗಿರಿ ಇವರು ಕೊಡಮಾಡುವ ಈ ಭಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯಿಂದ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಶ್ರೀ ಅಶೋಕಕುಮಾರ ಎನ್ ಉಪ್ಪಿನ (ದೈಹಿಕ ಶಿಕ್ಷಕರು ಬೆಥನಿ ಕಾನ್ವೆಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ-ಕಲಬುರಗಿ) ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಪ್ರೊ:ಅನಿಲಕುಮಾರ ಆರ್ ಪವಾರ್ (ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಮಹಾವಿದ್ಯಾಲಯ ಕಲಬುರಗಿ)ಯವರು ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಂದ್ರ ದೋತ್ರೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ- 29-11-2025 ರಂದು ಬೆಳಿಗ್ಗೆ 10.30 ಗಂಟೆಗೆ ಯಾದಗಿರಿಯ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
