ಕಲಬುರಗಿಯಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮಕ್ಕೆ ನ್ಯಾಯಾಧೀಶ ಶ್ರೀನಿವಾಸ್ ನವಲೆ ಚಾಲನೆ
ಕಲಬುರಗಿಯಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮಕ್ಕೆ ನ್ಯಾಯಾಧೀಶ ಶ್ರೀನಿವಾಸ್ ನವಲೆ ಚಾಲನೆ
ಕಲಬುರಗಿ: ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ–ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ (ಜೀಮ್ಸ್ ಆಸ್ಪತ್ರೆ), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರೆಡ್ ರಿಬ್ಬನ್ ಕ್ಲಬ್‌ಗಳು, ಎನ್‌ಎಸ್‌ಎಸ್ ಘಟಕ ಹಾಗೂ ಹಲವು ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
“ಹೆಚ್‌ಐವಿ/ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ” ಎಂಬ ಘೋಷವಾಕ್ಯದಡಿ, ಡಿಸೆಂಬರ್ 1, 2025 ರಂದು ಬೆಳಿಗ್ಗೆ 9.00 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಾಥಾಗೆ ಚಾಲನೆ ದೊರಕಿತು.
ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀನಿವಾಸ್ ನವಲೆ ಅವರು ಉದ್ಘಾಟಿಸಿ, ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸಿದರು.
ಈ ಸಂದರ್ಭದಲ್ಲಿ ಡಾ. ಶಂಕ್ರಪ್ಪಾ ಮೃಲಾರಿ, ಡಾ. ಶರಣಬಸಪ್ಪ ಕ್ಯಾತನಾಳ, ಡಾ. ಎ.ಎಸ್. ರುದ್ರವಾಡಿ, ಡಾ. ರೀಮಾ ಹರವಾಳ ಹಾಗೂ ಡಾ. ಚಂದ್ರಕಾಂತ ನರಬೋಳಿ ಸೇರಿದಂತೆ ಅನೇಕ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಹೆಚ್‌ಐವಿ/ಏಡ್ಸ್ ನಿಯಂತ್ರಣ, ತಡೆಗಟ್ಟುವಿಕೆ, ಜಾಗೃತಿ ಹಾಗೂ ಚಿಕಿತ್ಸಾ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
