ನರೇಗಲ್ಲ: ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ

ನರೇಗಲ್ಲ: ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಭಾರತದ ಸಂವಿಧಾನದ ಶಿಲ್ಪಿ, ಮಹಾನ್ ಸಮಾಜ ಪರಿವರ್ತಕ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಗೌರವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶ್ರೀಮತಿ ಬಿ.ಜಿ. ಶಿರ್ಸಿಯವರು ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿ ಮಾತನಾಡಿ, ಅಂಬೇಡ್ಕರ್ ಅವರ ಸಂವಿಧಾನ ರಚನೆ, ಸಮಾಜ ಸುಧಾರಣೆ ಹಾಗೂ ಸಮಾನತೆಯ ಸಂಕಲ್ಪಗಳು ಇಂದಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.

ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂವಿಧಾನ ಮೌಲ್ಯಗಳನ್ನು ಕಾಪಾಡುವ ಸಂಕಲ್ಪ ತೆಗೆದುಕೊಂಡರು.

ಕಾರ್ಯಕ್ರಮವನ್ನು ವಿಧ್ಯಾರ್ಥಿಗಳಿಂದ ನಡೆದ ನುಡಿ ನಮನ, ಭಾವಗೀತೆ ಮತ್ತು ಸಂವಿಧಾನ ಓದಿನ ಮೂಲಕ ಸ್ಮರಣೀಯವಾಗಿ ನಡೆಸಲಾಯಿತು.

ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ