ಅತಿ ಹಿಂದುಳಿದ ಸ್ವಾಮೀಜಿಗಳಿಂದ ಆದಿಚುಂಚನಗಿರಿ ಶ್ರೀಗಳ ಸೌಹಾರ್ದ ಭೇಟಿ
ಅತಿ ಹಿಂದುಳಿದ ಸ್ವಾಮೀಜಿಗಳಿಂದ ಆದಿಚುಂಚನಗಿರಿ ಶ್ರೀಗಳ ಸೌಹಾರ್ದ ಭೇಟಿ
ಬೆಂಗಳೂರು : ರಾಜ್ಯದ ಅತಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವು ಡಾ. ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಆದಿಚುಂಚನಗಿರಿಯ ಶ್ರೀ ಡಾ. ನಿರ್ಮಲಾನಂದ ನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅತಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಯ ಕುರಿತು ಸುಧೀರ್ಘ ಚರ್ಚೆ ನಡೆಸಿದರು.
ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿಯ ಮಟ್ಟದಲ್ಲಿ ಡಿಸೆಂಬರ್ 7ರಂದು ಭೇಟಿ ಮಾಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ಸೇರಿದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಹಾಗೂ ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಯಿತು. ಅತಿ ಹಿಂದುಳಿದ ವರ್ಗಗಳ ಸಮುದಾಯವನ್ನು ಪ್ರತಿನಿಧಿಸುವ ಮಠಾಧೀಶರು ತಮ್ಮ ಸಮುದಾಯದ ಸಂಘಟನೆಗೆ ಒತ್ತು ನೀಡಿ ಆರ್ಥಿಕ ಸಾಮಾಜಿಕ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಆದಿಚುಂಚನಗಿರಿ ಮಠದ ನೇತೃತ್ವದಲ್ಲಿ ನೀಡಲಾಗುವುದು. ಹಿಂದುಳಿದ ಸಮುದಾಯದ ಜನರು ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುವಂತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರು ಆದಿ ಚುಂಚನಶ್ರೀ ಸ್ವಾಮೀಜಿ ಅವರಿಗೆ ಹಾರ ಪುಷ್ಪ ಹಣ್ಣು ಹಂಪಲು ನೀಡಿ ಸತ್ಕರಿಸಿದರು.ಅತಿ ಹಿಂದುಳಿದ ಸಮುದಾಯಕ್ಕೆ ಸಮಾನ ಪ್ರಾತಿನಿಧ್ಯ ನೀಡಿ ಸಮಗ್ರ ಅಭಿವೃದ್ಧಿಯೊಂದಿಗೆ ಮುಖ್ಯ ವಾಹಿನಿಯಲ್ಲಿ ಕರೆದುಕೊಂಡು ಹೋಗಲು ವಿಫಲವಾದ ಪ್ರಸಕ್ತ ಸನ್ನಿವೇಶದಲ್ಲಿ ಆದಿ ಚುಂಚನಗಿರಿ ಪೂಜ್ಯರ ಸಲಹೆ ಮಾರ್ಗದರ್ಶನ ಅತಿ ಹಿಂದುಳಿದ ಮಠಾಧೀಶರಿಗೆ ಶಕ್ತಿ ತುಂಬಿದೆ ಎಂದು ಪ್ರಣವಾನಂದ ಶ್ರೀ ಹೇಳಿದರು. ಆದಿ ಚುಂಚನಗಿರಿ ಶ್ರೀಗಳ ಭೇಟಿಯಿಂದ ಸಮುದಾಯಕ್ಕೆ ಆತ್ಮ ಬಲ ಹೆಚ್ಚಿದೆ ಎಂದು ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಬಸವನಾಗಿ ದೇವ ಶರಣರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಹೋಲಿ ಸಮಾಜದ ರಾಜಗುರು ಸ್ವಾಮಿಜಿ ಹಾಗೂ ಉಪ್ಪಾರ ಸಮಾಜದ ಭಗೀರಥ ಸ್ವಾಮೀಜಿ ಉಪಸ್ಥಿತರಿದ್ದರು.
