ಶಹಾಬಾದ ನಗರದಲ್ಲಿ ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ.
ಶಹಾಬಾದ ನಗರದಲ್ಲಿ ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ.
ನಾಗರಾಜ್ ದಂಡಾವತಿ ವರದಿ ಶಹಾಬಾದ್:ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಕೆ .ಪಿ.ಎಸ್. ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ ಮುಖವಾಡದ ಅಡಿಯಲ್ಲಿ, ಸರ್ಕಾರವು ರಾಜ್ಯದಾದ್ಯಂತ 40,000ಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸುತ್ತಿದೆ.ಎಂದು ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಅಧ್ಯಕ್ಷರಾದ ತುಳಜರಾಮ ಎನ್ ಕೆ ಹೇಳಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡುತ್ತಾ ಅವರು
ಕೆ .ಪಿ.ಎಸ್. ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಶಹಾಬಾದ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತರನಳ್ಳಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಂಕರಲಿಂಗ ಗುಡಿ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಹಳೆ ಶಹಾಬಾದ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ರಾಮಘಾಡ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಬಿರಕಟ್ಟ ಶಾಲೆ ಗಳನ್ನು ಕೆ .ಪಿ.ಎಸ್.ಗೆ ವಿಲೀನಗೊಳಿಸುತ್ತಿರುವ
ರಾಜ್ಯ ಸರ್ಕಾರವು ಕೆ .ಪಿ.ಎಸ್. ಮ್ಯಾಗ್ನೆಟ್ ಶಾಲೆ ಎಂಬ ಹೆಸರಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸಿದ್ಧತೆ ನಡೆಸುತ್ತಿದೆ. "ಗುಣಮಟ್ಟ" ಮತ್ತು "ಮಾದರಿ ಶಾಲೆಗಳು" ಎಂಬ ಆಕರ್ಷಕ ಪದಗಳ ಹಿಂದೆ, ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣದ ನಮ್ಮ ನವೋದಯ ಚಿಂತಕರು, ಕ್ರಾಂತಿಕಾರಿಗಳು ಗಳಿಸಿದ ಆಶಯವನ್ನು ನಾಶಪಡಿಸುವ ಒಂದು ನಿಷ್ಕರುಣ ಪ್ರಯತ್ನ ಅಡಗಿದೆ.ಸರ್ಕಾರವು ಪ್ರತಿ ಹಳ್ಳಿಗೆ ಬಸ್ ಬಿಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಆದರೆ ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸ್ತವತೆ ಹೀಗಿರುವಾಗ, 6-7 ಕೀ.ಮಿ ದೂರದ ಶಾಲೆಯನ್ನು ತಲುಪಲಾಗದೆ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಾರಷ್ಟೇ!
ಸರ್ಕಾರವು ಕಾರ್ಪೊರೇಟ್ ಹಿತಾಸಕ್ತಿ ಕಾಪಾಡಲು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳು ಮುಚ್ಚೋದಿಲ್ಲ ಎಂಬ ಶಿಕ್ಷಣ ಮಂತ್ರಿಗಳ ಮಾತುಗಳು ಕೇವಲ ಜನಗಳನ್ನು ದಾರಿ ತಪ್ಪಿಸುವತ್ತ ಸಾಗುತ್ತೇವೆ. ರಾಜ್ಯ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಒಂದೇ ಒಂದು ಸರ್ಕಾರಿ ಶಾಲೆಯೂ ಕೂಡ ಮುಚ್ಚದಂತೆ ಲಿಖಿತ ರೂಪದಲ್ಲಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಮಾತನಾಡುತ್ತಾ, ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಹಾಗೂ ತಾಂಡಾಗಳ ಶಾಲೆಗಳನ್ನು ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ.
ರಾಜ್ಯದ ಬಡ ರೈತ-ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಸಂಪೂರ್ಣವಾಗಿ ಕಸೆದುಕೊಳ್ಳುವ ಈ ನೀತಿ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು..
ಈ ಸಂದರ್ಭದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ನವೋದಯ ಹಾಗೂ ಸ್ವಾತಂತ್ರ್ಯ ಹೋರಾಟದ ಮಹಾನ್ ವ್ಯಕ್ತಿಗಳ ಭಾವಚಿತ್ರ ಹಿಡಿದು, ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆಯಲ್ಲಿ ಮಾನ್ಯ ತಹಸಿಲ್ದಾರರ ಮೂಲಕ ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಐಡಿಎಸ್ಓ ಜಿಲ್ಲಾ ಜಂಟಿ ಕಾರ್ಯದರ್ಶಿ ಬಾಬು ಪವರ್ ವಹಿಸಿದ್ದರು, ಜಿಲ್ಲಾ ಖಜಾಂಚಿ ಸ್ಪೂರ್ತಿ ಗುರುಜಲ್ಕರ್, ಜಿಲ್ಲಾ ಜಂಟಿ ಕಾರ್ಯದರ್ಶಿಗಳಾದ ದೇವರಾಜ್ ರಾಜೋಳ,ರಾಹುಲ್ ಜಾಧಾವ್, ಬೃಂದಾ ಎಸ್ ಜಿ, ಶೃಷ್ಠಿ ಎರ್.ಜಿ, ಅಜಯ, ಪವನ, ಶ್ರೀ ಶೈಲ್ ಹಾಗೂ ಪೋಷಕರಾದ ಕನಕ ಶಿಬಿರಕಟ್ಟಿ, ಸಿದ್ದು, ರಘು ಪವರ್ ,ಹಾಗೂ ಹಲವಾರು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
