ಕುರುಳಗೇರಾ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಸ್ಥೆ – ಅಮರನಾಥ್ ಸಾಹು ಕುಳಗೇರಿ ಆಕ್ರೋಶ
ಕುರುಳಗೇರಾ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಸ್ಥೆ – ಅಮರನಾಥ್ ಸಾಹು ಕುಳಗೇರಿ ಆಕ್ರೋಶ
ಯಡ್ರಾಮಿ ತಾಲೂಕಿನ ಕುರುಳಗೇರಾ ಗ್ರಾಮ ಪಂಚಾಯಿತಿಯಲ್ಲಿ ಹಲವು ಅವ್ಯವಸ್ಥೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಯ ಪಾಲನೆ ಮಾಡದೇ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ಗ್ರಾಮಸ್ಥ ಅಮರನಾಥ್ ಸಾಹು ಕುಳಗೇರಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಗ್ರಂಥಾಲಯವನ್ನು ಉದ್ಘಾಟನೆ ಮಾಡಿದರೂ, ಸಂಬಂಧಪಟ್ಟ ಸರ್ಕಾರಿ ಸಿಬ್ಬಂದಿ ಜೇವರ್ಗಿಯಲ್ಲಿ ವಾಸವಾಗಿದ್ದು, ದಿನಗೂಲಿ ನೌಕರರೊಬ್ಬರನ್ನು ನೇಮಿಸಿ ಗ್ರಂಥಾಲಯವನ್ನು ಸರಿಯಾದ ಸಮಯಕ್ಕೆ ತೆರೆಯದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಮುರಂ ಹಾಕದೆ, ಸಿಸಿ ರಸ್ತೆ ಕಾಮಗಾರಿಯನ್ನು ಕೈಗೊಂಡಿಲ್ಲ. “ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಾಂತರ ರೂಪಾಯಿ ಅನುದಾನ ನೀಡುತ್ತಿದೆ. ಆದರೆ ಆ ಅನುದಾನ ಎಲ್ಲಿ ಬಳಸುತ್ತಿದೆ?” ಎಂದು ಪ್ರಶ್ನಿಸಿದ ಅವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು ಹಾಗೂ ಅಧ್ಯಕ್ಷರು ಕೂಡಲೇ ಜವಾಬ್ದಾರಿತನದಿಂದ ಕ್ರಮ ಕೈಗೊಂಡು ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದು ಆಗ್ರಹಿಸಿದರು.
– ವರದಿ: ಜೇಟ್ಟೆಪ್ಪ ಎಸ್. ಪೂಜಾರಿ
