ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಜನರು ಯಂತ್ರಗಳಿಗೆ ತಮ್ಮ ಸಮಯ ಮೀಸಲಿಟ್ಟಿದ್ದಾರೆ, ಇಂತಹ ಸಂದರ್ಭದಲ್ಲಿ ಮನುಷ್ಯ ತನ್ನ ಹಕ್ಕುಗಳನ್ನು ಮರೆತಿರುವನು ಎಂದು ಸೇಠ್ ಶಂಕರಲಾಲ್ ಲಾಹೋಟಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿಯರಾದ ಕರುಣಾ ಇವರು ನುಡಿದರು.

ಮುಂದುವರೆದು ಹೆಚ್ಚುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು ಮತ್ತು ಸಾಂವಿಧಾನಿಕ ನಿಬಂಧನೆಗಳ ಬೆಳಕಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ ವೀಣಾ ಎಚ್ ಅವರು ಮಾನವ ಹಕ್ಕುಗಳ ಸಂರಕ್ಷಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗೀತಾ ಪಾಟೀಲ್ ಅವರು ಸ್ವಾಗತ ಮತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕವಿತಾ ಅಶೋಕ್ ಅವರು ಕಾರ್ಯಕ್ರಮ ನಿರೂಪಿಸಿದರು, ಕುಮಾರಿ ದಿವ್ಯಾ ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ ನಾಗರತ್ನ, ಶಿವಲೀಲಾ ಧೋತ್ರೆ, ದಾನಮ್ಮ ಬಿರಾದಾರ್, ಬಸಮ್ಮ ಗೊಬ್ಬುರ, ಅಶ್ವಿನಿ ಮಠ, ಮೋಹ್ಸಿನ ಫಾತಿಮಾ ಇನ್ನಿತರರು ಮತ್ತು ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು.