ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರ ಹಾಗೂ ಶೈಕ್ಷಣಿಕ ಸಮಸ್ಯೆಗಳ ಕುರಿತು ಮಹತ್ವದ ಸಭೆ ಶಶೀಲ್ ಜಿ ನಮೋಶಿ

ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರ ಹಾಗೂ ಶೈಕ್ಷಣಿಕ ಸಮಸ್ಯೆಗಳ ಕುರಿತು ಮಹತ್ವದ ಸಭೆ ಶಶೀಲ್ ಜಿ ನಮೋಶಿ

ಕಲಬುರ್ಗಿ: ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಪರಿಷತ್ ಶಾಸಕರು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಾನ್ಯ ಮಧು ಬಂಗಾರಪ್ಪನವರ ಜೊತೆ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿಪೂರ್ವ ವಿಭಾಗಗಳಿಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಿ, ಪ್ರಮುಖ ವಿಷಯಗಳ ಸಮಗ್ರವಾಗಿ ಚರ್ಚಿಸಲಾಯಿತು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಸಭೆಯಲ್ಲಿ ಪ್ರಮುಖವಾಗಿ

 ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಗ್ರೂಪ್ ಬಿ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಕುರಿತು.

 ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆ ಕುರಿತು.

 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಬಿಕಾಂ, ಬಿಎಡ್ ವಿದ್ಯಾರ್ಥಿಯನ್ನು ಪರಿಗಣಿಸುವ ಕುರಿತು.

 ಉಪನ್ಯಾಸಕರ ವೃಂದದಿಂದ ಪ್ರಾಂಶುಪಾಲರ ವೃಂದಕ್ಕೆ ಬಡ್ತಿ ನೀಡುವ ಕುರಿತು. 

 ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ ತುಂಬುವುದು ಹಾಗೂ ಕಾಲೇಜು ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಸಮಸ್ಯೆಗಳ ಕುರಿತು.

 ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಉಪನ್ಯಾಸಕರ ವೃಂದಕ್ಕೆ ಬಡ್ತಿ ನೀಡುವುದು ಸೇರಿದಂತೆ ಅನೇಕ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಪುಟ್ಟಣ್ಣ, ಶ್ರೀ ಡಿ.ಟಿ ಶ್ರೀನಿವಾಸ್, ಶ್ರೀ ರಾಮೋಜಿ ಗೌಡ, ಶ್ರೀ ಎಸ್.ವಿ ಸಂಕನೂರ, ಶ್ರೀ ಎಸ್.ಎಲ್ ಭೋಜೇಗೌಡ್ರು, , ಶ್ರೀ ಧನಂಜಯ ಸರ್ಜಿ, ಶ್ರೀ ಹಣಮಂತ ನಿರಾಣಿ ಹಾಗೂ ಶ್ರೀ ಮಧು ಜಿ ಮಾದೇಗೌಡ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು ಮಾನ್ಯ ಶಿಕ್ಷಣ ಸಚಿವರು ಈ ಚರ್ಚಿಸಿದ ವಿಷಯಖಳ ಬಗ್ಗೆ ಪರಿಶೀಲಿಸಿ ಈಡೇರಿಸುವ ಭರವಸೆ ನೀಡಿದರು ಎಂದು ನಮೋಶಿಯವರು ತಿಳಿಸಿದ್ದಾರೆ.