ಒಳ ಮೀಸಲಾತಿ ಶೀಘ್ರ ಜಾರಿಗೆ ಮಾದಿಗ ಸಮಾಜದಿಂದ ಪ್ರತಿಭಟನೆ

ಒಳ ಮೀಸಲಾತಿ ಶೀಘ್ರ ಜಾರಿಗೆ ಮಾದಿಗ ಸಮಾಜದಿಂದ ಪ್ರತಿಭಟನೆ

ಕಲಬುರಗಿ: ಸುಪ್ರಿಂಕೋರ್ಟ್ ನೀಡಿದ ಆದೇಶವನ್ನು ನಾವು ಗೌರವಿಸಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳ ಒಳಮೀಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗೆ ಸಮಾಜ ಸಂಘಟನೆಯ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

'ಒಳಮೀಸಲಾತಿ ಹೋರಾಟಕ್ಕಾಗಿ ಸುಮಾರು ವರ್ಷಗಳಿಂದ ಹೋರಾಟ ನಡೆಯುತ್ತಾ ಬಂದಿದೆ. ಎಂದು ಅಧ್ಯಕ್ಷ ಚಂದ್ರಕಾಂತ ನಾಟೀಕಾರ ಹೇಳಿದರು 

ನ್ಯಾಯಮೂರ್ತಿ ಎ.ಜಿ.ಸದಾಶಿವ ಆಯೋಗದ ವರದಿಯಲ್ಲಿ ಮಾದಿಗ ಸಮಾಜಕ್ಕೆ ಶೇ 6, ಛಲವಾದಿ ಸಮಾಜಕ್ಕೆ ಶೇ 5.50, ಅಲೆಮಾರಿ, ಅಸ್ಪೃಶ್ಯ ಜಾತಿಗಳಿಗೆ ಶೇ 3ರಷ್ಟು ಮೀಸಲಾತಿ ನೀಡಲು ಶಿಫಾರಸು ಮಾಡಿದೆ' ಎಂದರು ಹೇಳಿದರು.

'ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಎಂದು ಹೇಳಿದೆ. ಆದ್ದರಿಂದ ರಾಜ್ಯ ಸರ್ಕಾರ ತಡ ಮಾಡದೇ ಸಚಿವ ಸಂಪುಟ ಸಭೆ ಕರೆದು ಶೀಘ್ರ ಜಾರಿಗೊಳಿಸಬೇಕು' ಎಂದು ಆಗ್ರಹಿಸಿದರು.

ನಗರದ ಮುಖ್ಯರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟಿಸಿದರು , ಪ್ರತಿಭಟನೆಯಲ್ಲಿ ಸಂಘಟನೆಯ ವಿಭಾಗೀಯ ಅಧ್ಯಕ್ಷ ಚಂದ್ರಕಾಂತ ನಾಟೀಕಾರ, ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರಕಾಶ ಎಸ್. ಮಾಳಗೆ, ಜಾನಪ್ಪ ಎನ್. ಶಿವನೂರು, ನಗರ ಘಟಕದ ಅಧ್ಯಕ್ಷ ಸುದರ್ಶನ ಎಸ್. ನಂಬಿ, ದಶರಥ ಕಲಗುರ್ತಿ, ರಾಜು ಕಟ್ಟಿಮನಿ, ಮಲ್ಲಪ್ಪ ಚಿಗನೂರು, ನಾಗಮ್ಮ ಕವಳೆಕರ್ ಸೇರಿದಂತೆ ಮತ್ತಿತರರು ಹಾಜರಿದ್ದರು.