7 ನೇ ವೇತನ ಆಯೋಗದ ಸೌಲಭ್ಯಗಳನ್ನು ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ನೀಡಲು ತಕ್ಷಣ ಆದೇಶ ಹೊರಡಿಸಿ ಶ್ರೀ ಶಶೀಲ್ ಜಿ ನಮೋಶಿ
7 ನೇ ವೇತನ ಆಯೋಗದ ಸೌಲಭ್ಯಗಳನ್ನು ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ನೀಡಲು ತಕ್ಷಣ ಆದೇಶ ಹೊರಡಿಸಿ ಶ್ರೀ ಶಶೀಲ್ ಜಿ ನಮೋಶಿ
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ 7 ನೇ ವೇತನ ಆಯೋಗದ ವರದಿಯನ್ನು ಒಪ್ಪಿಕೊಂಡು ವೇತನ ಆಯೋಗದ ವರದಿಯನ್ನು ಈಗಾಗಲೇ ಜಾರಿಗೆ ತಂದಿದೆ.ರಾಜ್ಯ ಸರ್ಕಾರಿ ನೌಕರರಿಗೆ ಅಗಸ್ಟ್ 2024 ತಿಂಗಳು 7 ನೇ ವೇತನ ಆಯೋಗದ ಎಲ್ಲ ಸೌಲಭ್ಯಗಳು ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ ಇದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಇನ್ನೂ ಆದೇಶ ಹೊರಡಿಸಿಲ್ಲ ಆದ್ದರಿಂದ ವೇತನ ಆಯೋಗದ ಎಲ್ಲ ಸೌಲಭ್ಯಗಳು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಅಗಸ್ಟ್ ತಿಂಗಳ 2024 ರಿಂದಲೆ ಜಾರಿಗೆ ಬರುವಂತೆ ತಕ್ಷಣ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶ್ರೀ ಶಶೀಲ್ ಜಿ ನಮೋಶಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.