ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ
ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ
ಕಮಲನಗರ: ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಡಿಗ್ಗಿ ಗ್ರಾಮದ ಬಳಿ ಶುಕ್ರವಾರ ಸಂಜೆ ಅಪರಿಚಿತ ಕಾರೋಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ಹಾಲು ತೆಗೆದುಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ, ಈ ಅಪಘಾತದಲ್ಲಿ ಭೀಮರಾವ(39) ಎಂಬಾತನನ್ನು ಗಂಭೀರವಾಗಿ ಗಾಯಗೊಂಡ ದುರ್ಧೈವಿ ಎಂದು ಗುರುತಿಸಲಾಗಿದೆ.
ಗಾಯಗೊಂಡ ಭೀಮರಾವ ಅವರನ್ನು ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕಮಲನಗರದ ಪಿಎಸ್‍ಐ ಆಶಾ ರಾಠೋಡ್, ಎಎಸ್‍ಐ ಡೋಣಗಾಂವ್ ವಸಂತ, ಎಚ್.ಸಿ ಲೋಕೇಶ ತೆಲಂಗ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಡಿಕ್ಕಿ ಹೊಡೆದು ಪರಾರಿಯಾದ ಕಾರು ಶೋಧ ಕಾರ್ಯ ಪಿಎಸ್‍ಐ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ ಎನ್ನಲಾಗಿದೆ.
