ನರೇಗಲ್ಲಿನಲ್ಲಿ ಡಿಸೆಂಬರ್ 29, 30 ಮತ್ತು 31ರಂದು “ಅಕ್ಷರ ಜಾತ್ರೆ”
ನರೇಗಲ್ಲಿನಲ್ಲಿ ಡಿಸೆಂಬರ್ 29, 30 ಮತ್ತು 31ರಂದು “ಅಕ್ಷರ ಜಾತ್ರೆ”
ಗದಗ : ಶ್ರೀ ಅನ್ನದಾನೇಶ್ವರ ಸಂಸ್ಥಾನಮಠ ಹಾಲಕೆರೆ–ಗಂಜಿಹಾಲ ಅಕ್ಷರ ಭಾರತ ಪ್ರತಿಷ್ಠಾನ, ಗದಗ ಇವರ ಆಶ್ರಯದಲ್ಲಿ ಹಾಗೂ ವಿವಿಧ ಅಂಗಸಂಸ್ಥೆಗಳ ಸಹಯೋಗದಲ್ಲಿ, ಪೂಜ್ಯಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಡಿಸೆಂಬರ್ 29, 30 ಮತ್ತು 31ರಂದು ಮೂರು ದಿನಗಳ ಕಾಲ “ಅಕ್ಷರ ಜಾತ್ರೆ–2025” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ನರೇಗಲ್ಲಿನ ಶ್ರೀ ಅನ್ನದಾನೇಶ್ವರ ಪದವಿ/ಪದವಿ ಪೂರ್ವ/ಎಸ್.ಎ.ವಿ. ಪ್ರೌಢಶಾಲೆಯ ಮೈದಾನದಲ್ಲಿ ನಡೆಯಲಿದೆ. ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಜಾಗೃತಿ ವಿಷಯಗಳನ್ನು ಕೇಂದ್ರವಾಗಿಟ್ಟುಕೊಂಡು ವಿವಿಧ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಶ್ರೀ ಹಾಲಕೇರಿ ಸಂಸ್ಥಾನ ಮಠದ ಎಲ್ಲಾ ಅಂಗ ಸಂಸ್ಥೆಗಳ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಅಕ್ಷರ ಜಾತ್ರೆಯಲ್ಲಿ ಗಣ್ಯ ಸಾಹಿತಿಗಳು, ಚಿಂತಕರು, ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ವರದಿ : ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ,ಕಲ್ಯಾಣ ಕಹಳೆ, ಗದಗ
