ಮುಡಾ ಪ್ರಕರಣ,ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ನಾಯಕು.

ಮುಡಾ ಪ್ರಕರಣ,ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ನಾಯಕು.

ಮುಡಾ ಪ್ರಕರಣ,ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ನಾಯಕು.

ಬೆಂಗಳೂರು (ಆ.31) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ತುರ್ತಾಗಿ ಅನುಮತಿ ನೀಡಿದಂತೆ, ರಾಜ್ಯಪಾಲರು ತಮ್ಮ ಮುಂದೆ ಬಾಕಿ ಇರುವ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ , ಇವರ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್‌ ನಾಯಕರು ಇಂದು ರಾಜಭವನ ಚಲೋ’ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿದ ಕಾಂಗ್ರೆಸ್‌ ನಾಯಕರು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಮನವಿಸಲ್ಲಿಸಿದರು.ಬಾಕಿ ಉಳಿದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ” 

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಪ್ರೀಯಾಂಕ ಖರ್ಗೆ,ಡಾ, ಶರಣಪ್ರಕಾಶ ಪಾಟೀಲ ಸೇರಿದಂತೆ ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು, ಜಗದೇವ ಗುತ್ತೇದಾರ,ವಿಧಾನಪರಿಷತ್‌ ಸದಸ್ಯರು ಮತ್ತು ವೀರಪ್ಪ ಮೊಯ್ಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.