ಆಡಳಿತ ವೈಫಲ್ಯ ವಿರೋಧಿಸಿ ಜ. 10 ರಂದು ವಿನೂತನ ಹೋರಾಟ
ಆಡಳಿತ ವೈಫಲ್ಯ ವಿರೋಧಿಸಿ ಜ. 10 ರಂದು ವಿನೂತನ ಹೋರಾಟ
ಕಲಬುರಗಿ: ಕೇವಲ ಗ್ಯಾರಂಟಿಗಳಲ್ಲಿಯೇ ಸರ್ಕಾರ ಮುಳುಗಿದೆ. ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯತ್ತ ಗಮನ ಹರಿಸದೇ ಜನರ ಸಂಕಷ್ಟಗಳಿಗೆ ಸ್ಪಂದಿಸದೆ ಕಾಲಹರಣ ಮಾಡುತ್ತಿದ್ದು, ಸರ್ಕಾರದ ಆಡಳಿತ ವೈಫಲ್ಯ ವಿರೋಧಿಸಿ ಜನೆವರಿ 10 ರಂದು ಕುದುರೆ ಮತ್ತು ಕತ್ತೆಗಳೊಂದಿಗೆ ವಿನೂತನ ಹೋರಾಟ ಹಮ್ಮಿಕೊಳ್ಳಲಾಗಿದ ಎಂದ ಬಿಜೆಪಿ ಓಬಿಸಿ ಮೋರ್ಚ ನಗರಾಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಮರೀಚಿಕೆ ಮಾಡಿರುವ ಸರ್ಕಾರದ ನಡೆ ಖಂಡನಾರ್ಹ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಹುತೇಕ ಅಭಿವೃದ್ಧಿ ಕಾರ್ಯ ನಿಂತು ಹೋಗಿವೆ. ಕಲಬುರಗಿ ನಗರದಲ್ಲಿನ ಎಲ್ಲಾ ಮುಖ್ಯ ರಸ್ತೆಗಳ ಟಾರ್ ಕಿತ್ತು ಹೋಗುತ್ತಿದೆ. ಅದಕ್ಕೆ ದುರಸ್ಥಿ ಮಾಡಲು ಇಲಾಖೆಗಳೆಲ್ಲಿ ಹಣದ ಕೊರತೆ ಇದೆ ಎಂದು ಅಧಿಕಾರಿಗಳು ಹೇಳಿತ್ತಿದ್ದಾರೆ. ಇನ್ನೂ ಗ್ರಾಮೀಣ ಭಾಗದ ರಸ್ತೆಗಳ ಗತಿಯೇನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಸಿಗೆ ಕಾಲ ಇನ್ನೂ 2 ತಿಂಗಳು ದೂರವಿದೆ. ಕುಡಿಯುವ ನೀರಗಾಗಿ ಈಗಾಗಲೇ ಅನೇಕ ಹಳ್ಳಿಗಳಲ್ಲಿ ಹಾಹಾಕಾರ ಆರಂಭವಾಗಿದೆ. ಕುಡಿಯುವ ನೀರಿನ ಕುರಿತು ಜಿಲ್ಲಾಡಳಿತಗಳು ಈಗಲೇ ಕಾರ್ಯಪ್ರವೃತ್ತರಾಗಬೇಕು. ಇಲ್ಲದಿದ್ದಲ್ಲಿ ಬೇಸಿಗೆ ಕಾಲದಲ್ಲಿ ಜನರು ಗುಳೆ ಹೋಗುತ್ತಾರೆ. ಜಾನುವಾರಗಳು ನೀರಲ್ಲದೇ ಸಾಯುವಂತ ಪರಿಸ್ಥಿತಿ ಎದುರಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎನ್ನುವದು ಬಹುತೇಕ ನಿಂತು ಹೋಗಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಹಿಂದುಳಿದ ವರ್ಗದ ನಾಯಕ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡುತ್ತಿದ್ದಾರೆ.
ನಾನೂ ದಲಿತ ಎಂದು ದಲಿತ ವರ್ಗದ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಲು ಕಾರಣರಾದ ಸಿದ್ದರಾಮಯ್ಯ ಈಗ ಡಿ. ಕೆ. ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಲು ಕಾಡುತ್ತಿರುವುದು ವಿಪರ್ಯಾಸವಾಗಿದೆ. ಇಂತಹ ಮುಖ್ಯಂತ್ರಿಯಿಂದ ರಾಜ್ಯದ ಅಭಿವೃದ್ಧಿ ಸಾಧ್ಯವೆ? ಎಂದು ಟೀಕಿಸಿದ್ದಾರೆ. ಯುವಕರಿಗೆ ಉದ್ಯೋಗ ನೀಡುವಂತ ಬೃಹತ್ ಕೈಗಾರಿಕೆಗಳನ್ನು ಕಲ್ಯಾಣ ಕರ್ನಾಟಕದ ಭಾಗದಲ್ಲಿ ತರಬೇಕು. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಬಂದ್ ಮಾಡುವ ಸ್ಥಿತಿಯಲ್ಲಿ ಬಂದು ನಿಂತಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗುವ ನಿಟ್ಟಿನಲ್ಲಿ ಹೊಸ ಹೊಸ ಕಾರ್ಯಯೋಜನೆ ಸಿದ್ಧಪಡಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
