ತೂನಸನಹಳ್ಳಿ ಎಸ್ ಗ್ರಾಮದಲ್ಲಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಅನಾವರಣ
ತೂನಸನಹಳ್ಳಿ ಎಸ್ ಗ್ರಾಮದಲ್ಲಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಅನಾವರಣ
ಕಲಬುರಗಿ: ತಾಲೂಕಿನ ತೂನಸನಹಳ್ಳಿ ಎಸ್ ಗ್ರಾಮದಲ್ಲಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಅನಾವರಣ ಸಮಾರಂಭ ಶ್ರದ್ಧಾಭಕ್ತಿಯಿಂದ ನಡೆಯಿತು. ದಲಿತ ಜನ ಜಾಗೃತಿ ವೇದಿಕೆಯ ಸಂಸ್ಥಾಪಕರಾದ ರಾಜಕುಮಾರ ಹುಗ್ಗಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಿವನ ಪಾಟೀಲ್, ವರ ಜೋತಿ ಬಂತೆ ಜಿ, ಮರೆಪ್ಪ ಹಳ್ಳಿ ಸೇರಿದಂತೆ ವೇದಿಕೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು, ಡಾ. ಅಂಬೇಡ್ಕರ್ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಕುರಿತು ಮಾತನಾಡಿದರು. ಡಾ. ಅಂಬೇಡ್ಕರ್ ಅವರ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.
ಪ್ರತಿಮೆ ಅನಾವರಣದ ನಂತರ ಪುಷ್ಪಾರ್ಚನೆ ನೆರವೇರಿಸಲಾಯಿತು. ಕಾರ್ಯಕ್ರಮ ಶಾಂತಿಯುತವಾಗಿ ಹಾಗೂ ಸಂಭ್ರಮದಿಂದ ನೆರವೇರಿದ್ದು, ಗ್ರಾಮದ ಹಿರಿಯರು, ಯುವಕರು ಮತ್ತು ಮಹಿಳೆಯರು ಸಕ್ರಿಯವಾಗಿ ಪಾಲ್ಗೊಂಡರು.
