ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಸಿ ಎಂ ಬಿಡುಗಡೆ
ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಸಿ ಎಂ ಬಿಡುಗಡೆ
ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಇಂದು ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ವಿಧಾನಸೌಧದ 3ನೇ ಮಹಡಿ, ಕೊಠಡಿ ಸಂಖ್ಯೆ 334ರಲ್ಲಿ ನೇರಸಲಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ನಜೀರ್ ಅಹಮದ್ ಅವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಲಾಯಿತು. ಮಾನ್ಯ ಮುಖ್ಯಮಂತ್ರಿಗಳು ಸಚಿವಾಲಯದ ಅಧಿಕಾರಿ ಮತ್ತು ನೌಕರರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ, ಆಡಳಿತಾತ್ಮಕ ಕಾರ್ಯಗಳಲ್ಲಿ ಅವರು ನೀಡುತ್ತಿರುವ ಸೇವೆ ಮತ್ತು ಶ್ರಮವನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿ/ನೌಕರರ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಸಂಗಾ, ಉಪಾಧ್ಯಕ್ಷರಾದ ಶ್ರೀ ಹರ್ಷ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಭಿಜಿತ್ ಹಾಗೂ ಸಂಘದ ಪದಾಧಿಕಾರಿಗಳಾದ ಚೇತನ್ ಆರ್., ಶಿವಾನಂದ್, ಚಂದನ್, ಕಿರಣ್ ಕೋನಿ, ಸಂದೀಪ್ ಪಾಟೀಲ್, ಶ್ರೀಮತಿ ವೀಣಾ, ಶ್ರೀ ಸಿದ್ದರಾಜು ಭೋಜ್ರಾಜು, ಶಾಂತಕುಮಾರ್, ವೀರನಗೌಡ ಸೇರಿದಂತೆ ಹಲವಾರು ಅಧಿಕಾರಿ ಮತ್ತು ನೌಕರರು ಉಪಸ್ಥಿತರಿದ್ದರು.
