ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗಿದೆ
ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗಿದೆ
ನಾಗರಾಜ್ ದಂಡಾವತಿ ವರದಿ ಶಹಾಬಾದ : - ಕಲಿಕೆ ಕೇವಲ ಹೊರೆಯಾಗದೆ, ಸಂತೋಷದ ಚಟುವಟಿಕೆಯಾಗಿ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗ ಬೇಕಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ ಹೇಳಿದರು.
ಅವರು ಜೀವಣಗಿ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಗುಂಡಗುರ್ತಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಶಿಕ್ಷಣೇತರ ಚಟುವಟಿಕೆಗಳಲ್ಲಿ ತೊಡಗಿಸಿ, ಕಲಿಕೆಯನ್ನು ಒತ್ತಡವಿಲ್ಲದ ಸಂಭ್ರಮವನ್ನಾಗಿ ಮಾಡುತ್ತದೆ,ಮಕ್ಕಳಿಗೆ ಅದರಲ್ಲೂ ವಿಶೇಷವಾಗಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಆಧಾರಿತ ಚಟುವಟಿಕೆಗಳ ಬಲವರ್ಧನೆಗೆ ಕಲಿಕಾ ಹಬ್ಬವು ಸಂತೋಷದಾಯಕ ಹಾಗೂ ಅನುಭವಯುಕ್ತ ಕಲಿಕೆಯ ವಾತಾವರಣ ವನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಮುಖ್ಯ ಗುರು ಈಶ್ವರ ಸಂಕನೂರ ಮಾತನಾಡಿ, ಪ್ರತಿಭಾ ಕಾರಂಜಿ ಒಂದು ರೀತಿಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೇದಿಕೆಯಾದರೆ, ಕಲಿಕಾ ಹಬ್ಬ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ, ನಾಲ್ಕು ಗೋಡೆಗಳ ಮಧ್ಯೆ ಹೇಳಿಕೊಡುವ ಪಾಠಕ್ಕಿಂತ ಇಂತಹ ಪ್ರಾಯೋಗಿಕ ಪಾಠಗಳೇ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ, ಮಕ್ಕಳ ಕಲಿಕೆಯಲ್ಲಿ ಪಾಲಕರು ಸಹಕರಿಸಬೇಕು ಅವರಿಗಾಗಿ ಕೆಲವು ಸಮಯವನ್ನು ಪಾಲಕರು ಮೀಸಲಿಟ್ಟಾಗ ಪೋಷಕರ ಮತ್ತು ಮಕ್ಕಳ ಸಂಬಂಧವನ್ನು ಬಲಪಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಆಂಜನೇಯ ಜೀವಣಗಿ, ಮಲ್ಲಿಕಾರ್ಜನ ಪೂಜಾರಿ, ಅಕ್ರಂ ಪಟೇಲ, ಬಿಆರಪಿ ಬಸಲಿಂಗಮ್ಮ, ಬಸಮ್ಮ, ಸಿಆರಪಿ ವಿಶ್ವನಾಥ ಸ್ವಶೆಟ್ಟಿ, ಎಸಡಿಎಂಸಿ ಅಧ್ಯಕ್ಷ ಸೈದಪ್ಪ, ಗೌಡಪ್ಪಗೌಡ ಸೇರಿದಂತೆ ಪಾಲಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
