ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ಮೃತ್ಯುಂಜಯ ಹಿರೇಮಠ ನಾಮನಿರ್ದೇಶನ
ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ಮೃತ್ಯುಂಜಯ ಹಿರೇಮಠ ನಾಮನಿರ್ದೇಶನ
ನಾಗರಾಜ್ ದಂಡಾವತಿ ವರದಿ ಕಲ್ಯಾಣ ಕಹಳೆ
ಶಹಾಬಾದ: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ.
ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಫಲಾನುಭವಿಗಳಿಗೆ ಅರ್ಹ ಸದುಪಯೋಗ ತಲುಪಿಸುವ ಉದ್ದೇಶದಿಂದ ಶಹಾಬಾದ ತಾಲೂಕಿನ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದ್ದು.
ಶಹಾಬಾದ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರನ್ನಾಗಿ ಮೃತ್ಯುಂಜಯ ಸ್ವಾಮಿ ಹಿರೇಮಠ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ತಿದ್ದುಪಡಿ ಮಾಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈ ಅನುಷ್ಠಾನ ಸಮಿತಿ ನಿರ್ವಹಣೆಗೆ ವಾರ್ಷಿಕವಾಗಿ ಕೋಟ್ಯಾಂತರ ರೂ. ವೆಚ್ಚ ಮಾಡಲಾಗುತ್ತಿದೆ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಮೃತ್ಯುಂಜಯ ಹಿರೇಮಠ ರವರು ಆಯ್ಕೆ ಆಗಿರುವುದರಿಂದ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವುದು, ಅಸಮರ್ಪಕ ಅನುಷ್ಠಾನ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
