ಪ್ರತಿ ಮಗುವಿಗೂ ಲಸಿಕೆ ಹಾಕಿಸಿ. ಡಾ.ವೀರನಾಥ ಕನಕ್
ಪ್ರತಿ ಮಗುವಿಗೂ ಲಸಿಕೆ ಹಾಕಿಸಿ. ಡಾ.ವೀರನಾಥ ಕನಕ್
ವರದಿ ನಾಗರಾಜ್ ದಂಡಾವತಿ ಕಲ್ಯಾಣ ಕಹಳೆ ನ್ಯೂಸ್
ಶಹಾಬಾದ್: ತಾಲೂಕ ಮಟ್ಟದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಡಿ.21ರಿಂದ 24 ವರೆಗೆ ನಡೆಯಲಿದ್ದು, 5. ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸಬೇಕು ಎಂದು ತಾಲೂಕ ಆರೋಗ್ಯಾಧಿಕಾರಿ ಡಾ.ವೀರನಾಥ ಕನಕ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾಲೂಕಿನಲ್ಲಿ ಅಂದಾಜು 18,940 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 6 ತಂಡ ಬಸ್ ನಿಲ್ದಾಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲಿದೆ. 70 ತಂಡಗಳು ಬೂತ್ ಡಾ.ವೀರನಾಥ ಕನಕ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಲಿವೆ. 14 ಜನ ಆರೋಗ್ಯ ಸಂಸ್ಥೆಯ ಮೇಲ್ವಿಚಾರಕರು ಮೇಲ್ವಿಚಾರಣೆ ನಡೆಸಲಿದ್ದಾರೆ. ಸಾರ್ವಜನಿಕರು ಡಿ.21ರಂದು ಲಸಿಕ ಕೇಂದ್ರಕ್ಕೆ ಆಗಮಿಸಿ 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿಸಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
