ಮಾಣಿಕಪ್ರಭು ಶಹಾಪೂರಕರ್ ನೇಮಕ
ಮಾಣಿಕಪ್ರಭು ಶಹಾಪೂರಕರ್ ನೇಮಕ
ಕಲಬುರಗಿ : ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ “ಕಲಬುರಗಿ ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷರನ್ನಾಗಿ ಮಾಣಿಕಪ್ರಭು ಶಹಾಪೂರಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಾಲರಾಜ ಗುತ್ತೇದಾರ ಅವರು ತಿಳಿಸಿದ್ದಾರೆ.
ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
