ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಭಾರತಿ ಮುಕ್ತಿ ಮೋರ್ಚಾ ಪ್ರತಿಭಟನೆ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಭಾರತಿ ಮುಕ್ತಿ ಮೋರ್ಚಾ ಪ್ರತಿಭಟನೆ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಭಾರತಿ ಮುಕ್ತಿ ಮೋರ್ಚಾ ಪ್ರತಿಭಟನೆ

ಕಲಬುರ್ಗಿ: ಭಾರತಿ ಮುಕ್ತಿ ಮೋರ್ಚಾ ಹಾಗೂ ಮೂಲನಿವಾಸಿ ಮಹಿಳಾ ಸಂಘದ ವತಿಯಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕಾರ್ಯಕರ್ತೆಯರು ಇಂದು ತಿಮ್ಮಾಪುರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ, ಮಾನ್ಯ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಹಕ್ಕೋತ್ತಾಯಗಳ ಪತ್ರ ಸಲ್ಲಿಸಿದರು.

ಚಿಂಚೋಳಿ ತಾಲೂಕಿನ ಪುರಸಭೆ ವ್ಯಾಪ್ತಿಗೆ ಒಳಪಡುವ ವಾರ್ಡ್ ನಂ.17ರ ಆಶ್ರಯ ಕಾಲೋನಿ ಹಾಗೂ ವಿದ್ಯಾನಗರ ಬೆಳ್ಳಿ ಬೆಳಕು ಕಾಲೋನಿಗಳಲ್ಲಿ ದಿನಕೂಲಿಕಾರರು, ಹಿಂದುಳಿದ ವರ್ಗದವರು ಮತ್ತು ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದು, ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಈ ಕುರಿತು ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಪರಿಣಾಮವಾಗಿ ಮಹಿಳೆಯರು ಹಾಗೂ ನಾಗರಿಕರು ಪ್ರತಿದಿನ ಕೊಡ ಹಿಡಿದು ನೀರಿಗಾಗಿ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಆಶ್ರಯ ಕಾಲೋನಿ ಹಾಗೂ ವಿದ್ಯಾನಗರ ಬೆಳ್ಳಿ ಬೆಳಕು ಕಾಲೋನಿಗಳಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಭಾರತಿ ಮುಕ್ತಿ ಮೋರ್ಚಾ ಮುಖಂಡರು ಒತ್ತಾಯಿಸಿದರು.