ರಾಜೀವ್ ಅವಾಸ್ ಯೋಜನೆ ಅಡಿಯಲ್ಲಿ ಕೋಟನೂರ ಡಿ. ಬಡಾವಣೆಯ 320 ಜಿ. +.3 ಮನೆ ಹಂಚಿಕೆ ಪತ್ರ ವಿತರಣೆ
ರಾಜೀವ್ ಅವಾಸ್ ಯೋಜನೆ ಅಡಿಯಲ್ಲಿ ಕೋಟನೂರ ಡಿ. ಬಡಾವಣೆಯ 320 ಜಿ. +.3 ಮನೆ ಹಂಚಿಕೆ ಪತ್ರ ವಿತರಣೆ
ಕಲಬುರಗಿ: ನಗರದ ಡಾ.ಎಸ್.ಎಂ.ಪAಡಿತ ರಂಗಮAದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಕಲಬುರಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಕಲಬುರಗಿ, ಕೆ.ಕೆ.ಆರ್.ಡಿ.ಬಿ ಹಾಗೂ ವಸತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಎನ್.ಜಿ.ಬಿ ಪರಿಸರ ಪರಿಹಾರ ನಿಧಿಯಲ್ಲಿ ಒಳಚರಂಡಿ ಕಾಮಗಾರಿ ಹಾಗೂ ವಿವಿಧ ಅನುದಾನದ ಅಡಿಯಲ್ಲಿ ಒಟ್ಟು ರೂ. 108.82 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ, ಪೌರಕಾರ್ಮಿಕರಿಗೆ ನಿವೇಶನ ಖರೀದಿ ಪತ್ರ ವಿತರಣೆ ಹಾಗೂ ಕುಷ್ಠ ರೋಗದಿಂದ ಗುಣಮುಖ ಹೊಂದಿದವರಿಗೆ ನಿವೇಶನ ಹಕ್ಕು ಪತ್ರ ವಿತರಣಾ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಲಬುರಗಿ ವತಿಯಿಂದ ರಾಜೀವ್ ಅವಾಸ್ ಯೋಜನೆ ಅಡಿಯಲ್ಲಿ ಕೋಟನೂರ ಡಿ. ಬಡಾವಣೆಯ 320 ಜಿ.+.3 ಮನೆ ಹಂಚಿಕೆ ಪತ್ರವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಎಂ.ವೈ.ಪಾಟೀಲ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಹರವಾಳ್, ಮೇಯರ್ ವರ್ಷಾ ರಾಜೀವ ಜಾನೆ, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನಮ್, ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಅನುಪಮಾ ಕಮಕನೂರ, ಮಹ್ಮದ ಆಯೇಜ್ ಖಾನ್, ಶೇಖ್ ಹುಸೇನಿ, ಆಡಳಿತ ಪಕ್ಷದ ನಾಯಕ ಶೇಖ ಅಫಜಲ ಗೋಳಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡೂರು ಶ್ರೀನಿವಾಸಲು, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಕಾರ್ಯಪಾಲಕ ಅಭಿಯಂತರಾದ ಎಂ.ಎ.ಖಯುಮ್, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಶ್ರೀಧರ್, ಸಹಾಯಕ ಅಭಿಯಂತರಾದ ಶಶಿಕಾಂತ ಮಾಳಗಿ, ಅನೀಲ, ವಸಂತ, ಗೌತಮ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
